ಸಿರವಾರ: ಗ್ರಾಮೀಣ ಭಾಗದ ಶಾಲೆ, ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯಗಳಿಗೆ ಹೆಚ್ಚಿನ ಅನುದಾನವನ್ನು ಸರ್ಕಾರ ನೀಡುತ್ತಿದೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಹೇಳಿದರು.

ತಾಲ್ಲೂಕಿನ ಮರಾಟ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಭಾನುವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಗ್ರಾಮೀಣ ಭಾಗದಲ್ಲಿನ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಶಾಲೆಗಳಿಗೆ ಮೂಲ ಸೌಕರ್ಯಗಳಿಗೆ ಕೊಠಡಿಗಳನ್ನು ನಿರ್ಮಿಸಿ ಅನುಕೂಲ ಮಾಡಿಕೊಡುತ್ತಿದ್ದೇವೆ. ಅಭಿವೃದ್ಧಿ ಕಾಮಗಾರಿಗಳನ್ನು ನಿರ್ವಹಿಸುತ್ತಿರುವ ಗುತ್ತಿಗೆದಾರರು ಮತ್ತು ಅಧಿಕಾರಿಗಳು ಗುಣಮಟ್ಟ ಕಾಪಾಡಿಕೊಳ್ಳಬೇಕು ಎಂದರು.

ಸಂಸದ ಜಿ.ಕುಮಾರ ನಾಯಕ ಮಾತನಾಡಿ,‘ಸಂಸದರ ಅನುದಾನದಲ್ಲಿ ಮರಾಟ ಗ್ರಾಮದ ರಾಮಲಿಂಗೇಶ್ವರ ದೇವಸ್ಥಾನದ ಸಮುದಾಯಕ್ಕೆ ಭವನಕ್ಕೆ ₹ 50 ಲಕ್ಷ ಅನುದಾನ ನೀಡಲಾಗಿದ್ದು, ಅದನ್ನು ಗ್ರಾಮಸ್ಥರು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಶಾಸಕ ಜಿ.ಹಂಪಯ್ಯ ನಾಯಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚುಕ್ಕಿ ಶಿವಕುಮಾರ, ಪಂಚ ಗ್ಯಾರಂಟಿ ಯೋಜನೆ ತಾಲ್ಲೂಕು ಸಮಿತಿ ಅಧ್ಯಕ್ಷ ಬ್ರಿಜೇಶ ಪಾಟೀಲ, ಪಟ್ಟಣ ಪಂಚಾಯಿತಿ ಸದಸ್ಯ ಮೌಲಾಸಾಬ್ ವರ್ಚಸ್, ಹಾಜಿಸಾಬ್ ಚೌದ್ರಿ, ಮುಖಂಡರಾದ ಶಿವಶರಣ ಅರಿಕೇರಿ, ಕಲ್ಲೂರು ಬಸವರಾಜ ನಾಯಕ, ರಮೇಶ ದರ್ಶನಕರ್, ರೇಣುಕಾ, ಅಬ್ರಹಾಂ ಹೊನ್ನಟಗಿ, ಲಂಕೇಶ, ಅನಿಲ, ದುರುಗಪ್ಪ, ಮಂಜುನಾಥ, ದೇವರಾಜ, ಶರೀಫ್ ಸಾಬ್, ಮಲ್ಲಪ್ಪ, ರಮೇಶ ನಾಯಕ, ಸೇರಿದಂತೆ ಗ್ರಾಮಸ್ಥರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.