ಕವಿತಾಳ: ಲಂಚ ಸ್ವೀಕರಿಸಿ ಲೋಕಾಯುಕ್ತ ಪೊಲೀಸರಿಂದ ತಪ್ಪಿಸಿಕೊಂಡು ಕಾರಿನಲ್ಲಿ ಪರಾರಿಯಾಗಿದ್ದ ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸುರೇಶ ಶೆಟ್ಟಿ ಅವರನ್ನು ಕವಿತಾಳದ ಆತನ ಸ್ನೇಹಿತನ ಮನೆಯಲ್ಲಿ ಲಂಚದ ಹಣ ಸಮೇತ ಲೋಕಾಯುಕ್ತ ಪೊಲೀಸರು ಶುಕ್ರವಾರ ನಸುಕಿನ ವೇಳೆ ವಶಕ್ಕೆ ಪಡೆದಿದ್ದಾರೆ.

ಹೊಸ ಬಡಾವಣೆಯ ನಿವೇಶನದ ಇ ಖಾತೆ (ಫಾರಂ ನಂ.3) ನೀಡಲು ₹ 2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದ್ದು ಸಿರವಾರದ ಜಿ.ರಘುರಾಮರೆಡ್ಡಿ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ಗುರುವಾರ ಸಂಜೆ ಸಿರವಾರದಲ್ಲಿ ದೂರುದಾರರಿಂದ ₹ 1 ಲಕ್ಷ ಲಂಚ ಸ್ವೀಕರಿಸಿದ ಮುಖ್ಯಾಧಿಕಾರಿ ಲೋಕಾಯುಕ್ತ ಪೊಲೀಸರಿಂದ ತಪ್ಪಿಸಿಕೊಂಡು ಕಾರಿನಲ್ಲಿ ಪರಾರಿಯಾಗಿದ್ದರು. ಬೈಕ್ ನಲ್ಲಿ ಹಿಂಬಾಲಿಸಿದ ಪೊಲೀಸರ ಕೈಗೆ ಸಿಕ್ಕಿರಲಿಲ್ಲ. ಇಲ್ಲಿನ ಕಲ್ಮಠ ಆವರಣದಲ್ಲಿ ನಿಲ್ಲಿಸಿದ್ದ ಕಾರನ್ನು ಗುರುತಿಸಿದ ಪೊಲೀಸರು ಮೊಬೈಲ್ ಲೊಕೇಶನ್ ಆಧರಿಸಿ ಸ್ನೇಹಿತನ ಮನೆಯಲ್ಲಿ ತಂಗಿದ್ದ ಅಧಿಕಾರಿಯನ್ನು ಲಂಚದ ಹಣ ಸಮೇತ ವಶಕ್ಕೆ ಪಡೆದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ವಿಚಾರಣೆ ನಡೆಸಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆರೋಪಿಯ ಆರೋಗ್ಯ ತಪಾಸಣೆ ಮಾಡಿಸಲಾಯಿತು.

ಲೋಕಾಯುಕ್ತ ಡಿವೈಎಸ್ಪಿ ಪುರುಷೋತ್ತಮ ಮತ್ತು ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.