ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಿರವಾರ ಅಗ್ನಿಶಾಮಕ ಠಾಣೆಗೆ ಸ್ಥಳ ಪರಿಶೀಲನೆ

Published 2 ಜುಲೈ 2024, 14:26 IST
Last Updated 2 ಜುಲೈ 2024, 14:26 IST
ಅಕ್ಷರ ಗಾತ್ರ

ಸಿರವಾರ: ಪಟ್ಟಣದ ಜಾಲಾಪುರ ರಸ್ತೆಯಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕಾಗಿ ಮಂಗಳವಾರ ಶಾಸಕ ಜಿ.ಹಂಪಯ್ಯ ನಾಯಕ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಸ್ಥಳ ಪರಿಶೀಲನೆ ನಡೆಸಿತು.

ನಂತರ ಮಾತನಾಡಿದ ಶಾಸಕ ಜಿ.ಹಂಪಯ್ಯ ನಾಯಕ, ಅಗ್ನಿಶಾಮಕ ಠಾಣೆಯ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ಮಾಡಲಾಗುತ್ತಿದ್ದು, ಈ ಭಾಗದಲ್ಲಿ ಸಂಭವಿಸುವ ಅಗ್ನಿದುರಂತಗಳಿಗೆ ತಕ್ಷಣ ಸ್ಪಂದನೆ ಸಿಗಲಿದೆ ಎಂದರು.

ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷ ಬ್ರಿಜೇಶ ಪಾಟೀಲ,
ಮುಖಂಡರಾದ ಅರಿಕೇರಿ ಶಿವಶರಣ, ಸೂರಿ ದುರಗಣ್ಣ ನಾಯಕ, ಅಕ್ರಮ ಸಕ್ರಮ ಸಮಿತಿ ಸದಸ್ಯ ರಂಗನಾಥ ನಾಯಕ,  ಅಗ್ನಿಶಾಮಕ ಠಾಣೆಯ ಜಿಲ್ಲಾ ಮುಖ್ಯಸ್ಥ ಎಂ.ಡಿ ಮುಜುಬುಲ್ ಪಟೇಲ್, ತಹಶೀಲ್ದಾರ್‌ ರವಿ ಎಸ್.ಅಂಗಡಿ, ಸಿಪಿಐ ಎಂ.ಶಶಿಕಾಂತ, ಲೋಕೋಪಯೋಗಿ ಇಲಾಖೆ ಎಇಇ ಶಾಮೇಲಪ್ಪ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ತಿಮ್ಮಪ್ಪ ಜಗ್ಲಿ, ಕಂದಾಯ ಅಧಿಕಾರಿ ಶ್ರೀನಾಥ  ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT