ರಾಯಚೂರು: ‘ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗೆಗಿನ ಸಮೀಕ್ಷಾ ಕಾರ್ಯ ಶೀಘ್ರ ಆರಂಭವಾಗಲಿದ್ದು ರಾಜ್ಯ ಹೊರಡಿಸುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ಜಿಲ್ಲಾಧಿಕಾರಿ ನಿತೀಶ್ ಕೆ. ಸೂಚಿಸಿದರು.

ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯಕ್ಕೆ ರಚಿಸಲಾದ ಜಿಲ್ಲಾಮಟ್ಟದ ಸಮನ್ವಯ ಸಮಿತಿಯಲ್ಲಿ ಅವರು ಮಾತನಾಡಿದರು.

‘ಅಧಿಕಾರಿಗಳು ಮಾಸ್ಟರ್ ಟ್ರೇನರ್ಗಳು, ಗಣತಿದಾರರು ಮತ್ತು ಮೇಲ್ವಿಚಾರಕರಿಗೆ ಸರಿಯಾಗಿ ಮಾರ್ಗದರ್ಶನ ಮಾಡಬೇಕು. ಗೊಂದಲಗಳಿದ್ದರೆ ಹಿರಿಯ ಅಧಿಕಾರಿಗಳಿಂದ ಕೇಳಿ ತಿಳಿದುಕೊಳ್ಳಬೇಕು. ಯಾವುದೇ ರೀತಿಯ ವ್ಯತ್ಯಾಸವಾಗದಂತೆ ಸಮೀಕ್ಷೆ ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಳ್ಳಬೇಕು’ ಎಂದು ಸೂಚನೆ ನೀಡಿದರು.

‘2024ನೇ ಸಾಲಿನಲ್ಲಿ ಜಿಲ್ಲಾ ಸಾಂಖ್ಯಿಕ ಇಲಾಖೆಯ ಪ್ರಕಾರ ಅಂದಾಜು 4,75,000 ಕುಟುಂಬಗಳಿವೆ. ಯಾವ ಕುಟುಂಬವೂ ಸಮೀಕ್ಷೆಯಿಂದ ಹೊರಗುಳಿಯದಂತೆ ಎಚ್ಚರ ವಹಿಸಬೇಕು. ಸಾಮಾನ್ಯವಾಗಿ ಎಲ್ಲ ವಾಸದ ಮನೆಗಳಿಗೆ ವಿದ್ಯುತ್ ಸಂಪರ್ಕ ಇರುವುದರಿಂದ ವಿದ್ಯುತ್ ಬಿಲ್ಲಿನ ಆರ್ಆರ್ ಸಂಖ್ಯೆ ಆಧಾರದ ಮೇಲೆಯೂ ಮನೆಗಳನ್ನು ಗುರುತಿಸಬೇಕು. ವಿದ್ಯುತ್ ಸಂಪರ್ಕವಿಲ್ಲದ ಮನೆಗಳಿಗೂ ಸಹ ಗ್ರಾಮ ಆಡಳಿತ ಅಧಿಕಾರಿಗಳ ಮೂಲಕ ಸಂಪರ್ಕ ಮಾಡಬೇಕು’ ಎಂದು ತಿಳಿಸಿದರು.

‘ಗ್ರಾಮಗಳಿಗೆ ಭೇಟಿ ನೀಡಿ ಪ್ರತಿಯೊಂದು ಮನೆಗಳ ಸರ್ವೆ ಮಾಡಬೇಕು. ಈ ಬಗ್ಗೆ ಆಯಾ ತಾಲ್ಲೂಕುಗಳ ತಹಶೀಲ್ದಾರ್ರು ಮತ್ತು ತಾಲ್ಲೂಕು ಪಂಚಾಯಿತಿ ಇಒ ಅಧಿಕಾರಿಗಳು ಮೇಲ್ವಿಚಾರಣೆ ಮಾಡಬೇಕು’ ಎಂದು ಸೂಚನೆ ನೀಡಿದರು.

‘65 ಮಾಸ್ಟರ್ ಟ್ರೇನರ್, ಪ್ರತಿ 150 ಮನೆಗಳಿಗೆ ಒಬ್ಬ ಗಣತಿದಾರ, 20 ಗಣತಿದಾರರಿಗೆ ಒಬ್ಬರು ಮೇಲ್ವಿಚಾರಕರಂತೆ ನೇಮಿಸಿ ಸಮೀಕ್ಷೆ ನಡೆಸಬೇಕು. ಗಣತಿದಾರರನ್ನಾಗಿ ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಿಸಲು ಮತ್ತು ಮೇಲ್ವಿಚಾರಕರನ್ನಾಗಿ ಸಿಆರ್ಪಿಗಳನ್ನು ನೇಮಿಸಲು ಈ ಸಂಬಂಧ ಕೂಡಲೇ ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗೆ ಪತ್ರ ಬರೆದು ಕ್ರಮ ವಹಿಸಬೇಕು’ ಎಂದು ಬಿಸಿಎಂ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಿಒಒ ಈಶ್ವರಕುಮಾರ ಕಾಂದೂ, ರಾಯಚೂರು ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹಾಪಾತ್ರ, ರಾಯಚೂರು ಉಪ ವಿಭಾಗಾಧಿಕಾರಿ ಗಜಾನನ ಬಾಳೆ, ರಾಯಚೂರು ನಗರಾಭಿವೃದ್ಧಿ ಕೋಶದ ಅಧಿಕಾರಿ ತಿಮ್ಮಪ್ಪ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

‘65 ಪ್ರಶ್ನೆ ಆ್ಯಪ್ ಮೂಲಕ ಸಮೀಕ್ಷೆ’ ‘ಸಮೀಕ್ಷೆ ಕಾರ್ಯವು ಸೆ.22ರಿಂದ ಆರಂಭವಾಗಿ ಅಕ್ಟೋಬರ್ 7ರೊಳಗೆ ಪೂರ್ಣಗೊಳ್ಳಬೇಕು. 65 ಪ್ರಶ್ನಾವಳಿಗಳಿದ್ದು ಕುಟುಂಬಗಳಿಂದ ಮಾಹಿತಿ ಪಡೆದು ಆ್ಯಪ್ ಮೂಲಕವೇ ಸಮೀಕ್ಷೆ ಮಾಡಲಾಗುತ್ತದೆ. ಜಿಲ್ಲೆಯಲ್ಲಿನ ಒಟ್ಟು ಕುಟುಂಬಗಳ ಸಂಖ್ಯೆಗೆ ಅನುಗುಣವಾಗಿ ಪ್ರತಿ ಸಮೀಕ್ಷೆದಾರರು ಎಲ್ಲ ಮನೆಗಳಿಗೆ ಖುದ್ದು ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸುನೀತಾ ಸಭೆಗೆ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.