ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಸ್ಕಿ ಬಿಜೆಪಿ ಮಂಡಲಕ್ಕೆ ಸೊಪ್ಪಿಮಠ ಅಧ್ಯಕ್ಷ

Published 26 ಫೆಬ್ರುವರಿ 2024, 13:56 IST
Last Updated 26 ಫೆಬ್ರುವರಿ 2024, 13:56 IST
ಅಕ್ಷರ ಗಾತ್ರ

ಮಸ್ಕಿ: ಬಿಜೆಪಿ ಮಂಡಲ ಅಧ್ಯಕ್ಷರನ್ನಾಗಿ ಶರಣಬಸವ ಸೊಪ್ಪಿಮಠ ಅವರನ್ನು ನೇಮಕ ಮಾಡಿ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಶಿವರಾಜ ಪಾಟೀಲ ಆದೇಶ ಹೊರಡಿಸಿದ್ದಾರೆ.

ಹಿಂದಿನ ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ ಅವರ ಅವಧಿ ಮುಗಿದ ಹಿನ್ನೆಲೆಯಲ್ಲಿ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಹಿಂದೆ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಯಾಗಿ ಶರಣಬಸವ ಸೊಪ್ಪಿಮಠ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದರು.

ಮಂಡಲ ಅಧ್ಯಕ್ಷ ಸ್ಥಾನಕ್ಕೆ ಶರಣಬಸವ ಸೊಪ್ಪಿಮಠ ಸೇರಿದಂತೆ ಮಲ್ಲಿಕಾರ್ಜುನ ಯಾದವ ಹಾಗೂ ಕಿರಣ್‌ ಸಾನಬಾಳ ಅವರ ಹೆಸರು ಶಿಫಾರಸು ಮಾಡಲಾಗಿತ್ತು. ಅಂತಿಮವಾಗಿ ಪಕ್ಷದ ವರಿಷ್ಠರು ಶರಣಬಸವ ಸೊಪ್ಪಿಮಠ ಅವರಿಗೆ ಜವಾಬ್ದಾರಿ ನೀಡಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT