ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನದಟ್ಟಣೆ ಕೇಂದ್ರದಲ್ಲಿ ಸಿಸಿಟಿವಿ ಅಳವಡಿಸಲು ಎಸ್‌ಪಿ ಸೂಚನೆ

Last Updated 3 ಜನವರಿ 2020, 14:46 IST
ಅಕ್ಷರ ಗಾತ್ರ

ರಾಯಚೂರು: ನಗರದಲ್ಲಿ100 ಕ್ಕಿಂತ ಹೆಚ್ಚು ಜನರು ಅಥವಾ ಒಂದು ದಿನದಲ್ಲಿ 500 ಕ್ಕಿಂತ ಹೆಚ್ಚು ಜನರು ಸೇರುವಂತಹ ಅಥವಾ ಬಂದು ಹೋಗುವಂತಹ ಸ್ಥಳಗಳಲ್ಲಿ ಕಮರ್ಷಿಯಲ್ ಕಾಂಪ್ಲೆಕ್ಸ್, ಧಾರ್ಮಿಕ ಸ್ಥಳಗಳಲ್ಲಿ, ಶಾಲಾ ಕಾಲೇಜುಗಳಲ್ಲಿ, ಆಸ್ಪತ್ರೆಗಳಲ್ಲಿ, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಗಳಲ್ಲಿ, ಬ್ಯಾಂಕುಗಳಲ್ಲಿ, ಪೆಟ್ರೊಲ್‌ ಬಂಕ್‌ ಸೇರಿದಂತೆ ಜನಸಂದಣಿ ಸ್ಥಳಗಳಲ್ಲಿ ಮಾಲೀಕರು ಕಡ್ಡಾಯವಾಗಿ ಸಿಸಿ ಕ್ಯಾಮೆರಾ ಅಳವಡಿಸಬೇಕು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಸೂಚಿಸಿದ್ದಾರೆ.

ಕರ್ನಾಟಕ ಪಬ್ಲಿಕ್ ಸೇಫ್ಟಿ ಆಕ್ಟ್ 2017 ಇದರ ಪ್ರಕಾರ ನಿಯಮ ಪಾಲನೆ ಮಾಡಬೇಕು.ಒಂದು ವೇಳೆ ಅಳವಡಿಸದಿದ್ದರೆ ಮೊದಲನೇ ಬಾರಿಗೆ ₹5 ಸಾವಿರ, ಎರಡನೇ ಬಾರಿ ₹10 ಸಾವಿರ ದಂಡ ವಿಧಿಸಲಾಗುವುದು. ಆನಂತರ ಲೈಸೆನ್ಸ್ ಕೂಡಾ ರದ್ದುಪಡಿಸಲಾಗುವುದು. ಮಳಿಗೆಗಳು ಇರುವ ಮಾಲೀಕರು ಸಿಸಿ ಕ್ಯಾಮರಾಗಳಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಅಳವಡಿಸಿಕೊಳ್ಳಲು ಕೋರಲಾಗಿದೆ.

ರಾಯಚೂರು ಜಿಲ್ಲೆಯಲ್ಲಿ ಮತ್ತು ನಗರ ಪ್ರದೇಶಗಳಲ್ಲಿ ಇತ್ತೀಚೆಗೆ ಕಳ್ಳತನ ಪ್ರಕರಣಗಳು ಹೆಚ್ಚುತ್ತಿವೆ. ಇದನ್ನು ತಡೆಗಟ್ಟಲು ಹಾಗೂ ಪ್ರತಿಭಟನೆಗಳು ನಡೆಯುವಾಗ ಸಾವಿರಾರು ಜನರು ಸೇರುವಾಗ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸುವುದು ಅತ್ಯಗತ್ಯವಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT