ಗುರುವಾರ , ಮಾರ್ಚ್ 30, 2023
21 °C
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ ಹೇಳಿಕೆ

ರಾಯಚೂರು: ₹1.38 ಕೋಟಿ ಮೌಲ್ಯದ ವಸ್ತುಗಳು ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ‘ಜಿಲ್ಲೆಯಾದ್ಯಂತ ಎರಡು ‌ವರ್ಷಗಳ ಅವಧಿಯಲ್ಲಿ 105 ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ 82 ಆರೋಪಿಗಳನ್ನು ಬಂಧಿಸಲಾಗಿದೆ. ₹1.38,47,138 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ತಿಳಿಸಿದರು.

‘ರಾಯಚೂರು ಜಿಲ್ಲೆಯಲ್ಲಿ 1 ನವೆಂಬರ್ 2019 ರಿಂದ 20ಅಕ್ಟೋಬರ್ 2021ರ ಅವಧಿಯಲ್ಲಿ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಪ್ರಕರಣಗಳನ್ನು ಪತ್ತೆ ಮಾಡಿ, ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಈ ಎಲ್ಲ ಸ್ವತ್ತುಗಳ ಮಾಲೀಕರಲ್ಲಿ ಕೆಲವರು ನ್ಯಾಯಾಲಯದಿಂದ ಪಡೆದಿದ್ದಾರೆ. 2019ರಲ್ಲಿ 51 ಪ್ರಕರಣಗಳು ವರದಿಯಾಗಿದ್ದವು. ಅವುಗಳಲ್ಲಿ 17 ಪ್ರಕರಣಗಳನ್ನು ಪತ್ತೆ ಮಾಡಿ, 12 ಮಂದಿ ಆರೋಪಿಗಳನ್ನು ಬಂಧಿಸಲಾಯಿತು. ಒಟ್ಟು ₹ 68,06,160 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಯಿತು. 2020ರಲ್ಲಿ 153 ಪ್ರಕರಣಗಳು ವರದಿಯಾಗಿದ್ದವು. ಅವುಗಳಲ್ಲಿ 68 ಪ್ರಕರಣಗಳನ್ನು ಪತ್ತೆ ಮಾಡಿ, 54 ಆರೋಪಿಗಳನ್ನು ಬಂಧಿಸಿಸಲಾಯಿತು. ಒಟ್ಟು ₹56,51,469 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಯಿತು. 2021ರ ಜನವರಿಯಿಂದ ಅಕ್ಟೋಬರ್ 20ರವರೆಗೆ ಒಟ್ಟು 138 ಪ್ರಕರಣಗಳು ವರದಿಯಾಗಿವೆ. ಅವುಗಳ ಪೈಕಿ  20 ಪ್ರಕರಣಗಳನ್ನು ಪತ್ತೆ ಮಾಡಿ, ₹13,89,500 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ಅವರು ತಿಳಿಸಿದರು.

‘₹64.37 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳು, 48 ಮೋಟರ್ ಸೈಕಲ್‌ಗಳು ಸೇರಿ ₹14.42 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ₹44.85 ಲಕ್ಷ ಮೌಲ್ಯದ ಎಲೆಕ್ಟ್ರಾನಿಕ್ ಬಿಡಿಭಾಗಗಳು, ₹3.73 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ’ ಎಂದು ಅವರು ತಿಳಿಸಿದರು. ಜಿಲ್ಲೆಯ ವಿವಿಧ ಠಾಣೆಗಳ ಪೊಲೀಸ್ ಅಧಿಕಾರಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು