ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸದೃಡತೆಗೆ ಕ್ರೀಡೆ ಅಗತ್ಯ: ನ್ಯಾ.ಮಲ್ಲಿಕಾರ್ಜುನಗೌಡ

Last Updated 25 ಫೆಬ್ರುವರಿ 2021, 13:34 IST
ಅಕ್ಷರ ಗಾತ್ರ

ರಾಯಚೂರು: ಮಾನಸಿಕ ಹಾಗೂ ದೈಹಿಕವಾಗಿಸದೃಢತೆ ಹೊಂದಬೇಕಾದರೆ ಪೊಲೀಸರಿಗೆ ಕ್ರೀಡಾಕೂಟ ಅಗತ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಹೇಳಿದರು.

ನಗರದ ಜಿಲ್ಲಾ ಪೊಲೀಸ್‌ ಪರೇಡ್ ಮೈದಾನದಲ್ಲಿ ಪೊಲೀಸ್‌ ಇಲಾಖೆಯಿಂದ ಗುರುವಾರ ಏರ್ಪಡಿಸಿದ್ದ 2020-21ನೇ ಸಾಲಿನ ಮೂರು ದಿನಗಳ ಪೊಲೀಸ್‌ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಪೊಲೀಸ್‌ ಇಲಾಖೆಯು ಒಂದು ಕುಟುಂಬವಿದ್ದಂತೆ ಮಾನಸಿಕವಾಗಿಸದೃಡತೆ ಹೊಂದಬೇಕಾದರೆ ಮನಸ್ಸು ಕ್ರೀಡಾಕೂಟದಲ್ಲಿಭಾಗಿಯಾಗುವುದು ಅತಿ ಅವಶ್ಯಕ. ಕ್ರೀಡಾಪಟುಗಳು ಸ್ಪರ್ಧೆ ಎಂದು ಭಾವಿಸಿ ಕ್ರೀಡೆಯಲ್ಲಿ ಭಾಗವಹಿಸಿದಾಗ ಮಾತ್ರ ಸಾಧನೆ ಸಾಧ್ಯ. ಮೂರು ದಿನಗಳ ಈ ಹಬ್ಬವನ್ನು ಪೊಲೀಸರು ಅತಿ ವಿಜೃಂಭಣೆಯಿಂದ ಆಚರಿಸಬೇಕು. ಜಿಲ್ಲಾ ಪೊಲೀಸ್‌ ಇಲಾಖೆಯಕ್ರೀಡಾಕೂಟ ಅಚ್ಚುಕಟ್ಟಾಗಿ ನಿರ್ವಹಿಸಿದೆ. ಎಲ್ಲಾರು ಒಂದಲ್ಲ ಒಂದು
ಕ್ರೀಡೆಯಲ್ಲಿ ತೊಡಗಿಕೊಳ್ಳುವುದರ ಮೂಲಕ ತಮ್ಮ ಆರೋಗ್ಯವನ್ನೂ ಸದೃಡವಾಗಿ ಇಟ್ಟುಕೊಳ್ಳಬೇಕು ಎಂದರು.

ಡಿವೈಎಸ್‍ಪಿ ಶಿವನಗೌಡ ಪಾಟೀಲ ಅವರು ಕ್ರೀಡಾ ಪಟುಗಳಿಗೆ ಪ್ರಮಾಣವಚನ ಬೋಧಿಸಿದರು.
ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿಕ್ಕಂ ಪ್ರಕಾಶ ಅಮೃತ್, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀಹರಿಬಾಬು, ಗೃಹರಕ್ಷಕ ದಳದ ಅಧಿಕಾರಿ ಪ್ರಮಾಣಂದ ಗೂಡ್ಕೆ ಹಾಗೂ ಪೆಲೀಸ್‌ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT