ಹಿರಿಯ ನಾಗರಿಕರಿಗೆ ವಿವಿಧ ಸ್ಪರ್ಧೆ

7

ಹಿರಿಯ ನಾಗರಿಕರಿಗೆ ವಿವಿಧ ಸ್ಪರ್ಧೆ

Published:
Updated:
Deccan Herald

ರಾಯಚೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸುರಕ್ಷಾ ಸಂಸ್ಥೆ, ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ನಿಮಿತ್ತ ಹಿರಿಯ ನಾಗರಿಕರಿಗೆ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಈಚೆಗೆ ಹಮ್ಮಿಕೊಳ್ಳಲಾಯಿತು.

ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಹಮ್ಮಿಕೊಂಡಿದ್ದ ಸ್ಪರ್ಧೆಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಆರ್.ನಾಗರಾಜ ಚಾಲನೆ ನೀಡಿದರು.

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಲ್ಯಾಣಾಧಿಕಾರಿ ಶ್ರೀದೇವಿ ನಿಡಗುಂದಿ ಅಧ್ಯಕ್ಷತೆ ವಹಿಸಿದ್ದರು. ಸುರಕ್ಷಾ ಸಂಸ್ಥೆ ಅಧ್ಯಕ್ಷ ಪವನಕಿಶೋರ ಪಾಟೀಲ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಮಹಾದೇವಪ್ಪ ಹಂಚಿನಾಳ, ವೀರಭದ್ರಪ್ಪ ಇದ್ದರು.

ಸ್ಪರ್ಧೆಗಳಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದವರಿಗೆ ಅಕ್ಟೋಬರ್‌ 1ರಂದು ನಡೆಯಲಿರುವ ಹಿರಿಯ ನಾಗರಿಕರ ದಿನಾಚಣೆಯಲ್ಲಿ ಬಹುಮಾನ ವಿತರಿಸಲಾಗುತ್ತದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !