ಬುಧವಾರ, ನವೆಂಬರ್ 25, 2020
23 °C

‘ಕ್ರೀಡೆಗಳಿಂದ ದೈಹಿಕ,ಮಾನಸಿಕ ದೃಢತೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

 ರಾಯಚೂರು: ಕ್ರೀಡೆಯಿಂದ ಪ್ರತಿಭೆ ಹೊರಹಾಕುವ ಅವಕಾಶದ ಜೊತೆಗೆ ದೈಹಿಕ, ಮಾನಸಿಕ ಅಭಿವೃದ್ಧಿಯಾಗಲಿದೆ ಎಂದು ಕಿಲ್ಲೆ ಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯರು ಹೇಳಿದರು.

ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಜಿಲ್ಲಾ ಘಟಕದಿಂದ ಮಂಗಳವಾರದಿಂದ ಹಮ್ಮಿಕೊಳ್ಳಲಾಗಿದ್ದ ಓಪನ್ ಟೆನ್ನಿಸ್ ಬಾಲ್ ಕ್ರಿಕೆಟ್‌ ಪಂದ್ಯಾವಳಿಗೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು.

ಕ್ರೀಡೆಗಳು ಯುವಕರಲ್ಲಿ ಆತ್ಮವಿಶ್ವಾಸ, ಉಲ್ಲಾಸ ಹೆಚ್ಚಿಸುತ್ತವೆ. ಸೋಲು–ಗೆಲುವು ಸಹಜ. ಕ್ರೀಡಾಪಟುಗಳು ತಮಗೆ ದೊರೆತ ಅವಕಾಶ ಸದ್ಬಳಕೆ ಮಾಡಿಕೊಂಡು ಪ್ರತಿಭೆ ಹೊರಹಾಕಬೇಕು ಎಂದು ತಿಳಿಸಿದರು.

ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ವಕೀಲ ಎನ್. ಶಿವಶಂಕರ ಮಾತನಾಡಿದರು. ನಗರಸಭೆ ಸದಸ್ಯ ಸಾಜಿದ್ ಸಮೀರ್, ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ವಿನೋದ ರೆಡ್ಡಿ, ಪದಾಧಿಕಾರಿ ಅಶೋಕ, ಮಂಜುನಾಥ, ಶರಣಪ್ಪ ಗೋನಾಳ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು