ಶನಿವಾರ, ಏಪ್ರಿಲ್ 17, 2021
32 °C

‘ವಾಲ್ಮೀಕಿಗೆ ಅಪಮಾನ: ಕಿಡಿಗೇಡಿಗಳ ಬಂಧಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಿರವಾರ: ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಕಿಡಿಗೇಡಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಶ್ರೀರಾಮ ಸೇನೆಯ ತಾಲ್ಲೂಕು ಘಟಕದ ಪದಾಧಿಕಾರಿಗಳು ತಹಶೀಲ್ ಕಚೇರಿ ಸಿಬ್ಬಂದಿ ವಿಜಯಕುಮಾರ ಸುಗಂಧಿ ಅವರಿಗೆ ಮಂಗಳವಾರ ಮನವಿ ಪತ್ರ ಸಲ್ಲಿಸಿದರು.

ಗೃಹ ಸಚಿವರಿಗೆ ಬರೆದ ಮನವಿ ಪತ್ರದಲ್ಲಿ ಬಾಗಲಕೋಟೆ ಜಿಲ್ಲೆ ರಬಕವಿ ಪಟ್ಟಣದ ಪ್ರಶಾಂತ, ಬಸವರಾಜ ಹಾಗೂ ಹರ್ಷಿತ ಮಹರ್ಷಿ ವಾಲ್ಮೀಕಿ ಹೆಸರಿನಲ್ಲಿ ವಾಟ್ಸ್‌ ಆ್ಯಪ್‌ ಗ್ರೂಪ್ ಮಾಡಿದ್ದಲ್ಲದೆ, ಅದರಲ್ಲಿ ವಾಲ್ಮೀಕಿ ಅವರ ಫೋಟೊಗಳನ್ನು ಅಶ್ಲೀಲವಾಗಿ ತಿದ್ದಿ ಸಾಮಾಜಿಕ ಜಾಲಾತಾಣದಲ್ಲಿ ಬಿಟ್ಟಿರುವುದು ಖಂಡನೀಯ. ಕೂಡಲೇ ಅವರನ್ನು ಬಂಧಿಸಿ ಕರ್ನಾಟಕದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಲಾಯಿತು.

ಶ್ರೀರಾಮ ಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ಅಂಬಣ್ಣ ನಾಯಕ, ವೆಂಕಟೇಶ ನಾಯಕ, ರಮೇಶ ನಾಯಕ, ಸಿದ್ದಲಿಂಗ ನಾಯಕ, ಮುಕ್ಕಣ್ಣ ಮತ್ತು ಸುರೇಶ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.