ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಶೈಲಕ್ಕೆ ತೆರಳುತ್ತಿದ್ದ ಪಾದಯಾತ್ರಿಕ ಸಾವು

Published 30 ಮಾರ್ಚ್ 2024, 18:55 IST
Last Updated 30 ಮಾರ್ಚ್ 2024, 18:55 IST
ಅಕ್ಷರ ಗಾತ್ರ

ರಾಯಚೂರು: ಶ್ರೀಶೈಲಕ್ಕೆ ಪಾದಯಾತ್ರೆಯ ಮೂಲಕ ರಾಯಚೂರು ಮಾರ್ಗವಾಗಿ ತೆರಳುತ್ತಿದ್ದ ರಾಬಾಗಲಕೋಟೆ ಜಿಲ್ಲೆಯ ರಬಕವಿ–ಬನಹಟ್ಟಿಯ ಶ್ರೀಶೈಲ ಎಂಬ ಯುವಕ ಶನಿವಾರ ಸಾವಿಗೀಡಾಗಿದ್ದಾನೆ.

ಸೋಮವಾರ ತಮ್ಮ ಊರಿನಿಂದ ಪಾದಯಾತ್ರೆ ಆರಂಭಿಸಿದ್ದ. ಮಾನ್ವಿ ತಾಲ್ಲೂಕಿನ ಚಿಕ್ಕ ಕೊಟ್ನೆಕಲ್ ಹೊರವಲಯದಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದ ವೇಳೆ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾನೆ.

ಸ್ಥಳೀಯರು ಕೂಡಲೇ 112ಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ ಶವ ಪರೀಕ್ಷೆಗಾಗಿ ಮಾನ್ವಿ ತಾಲ್ಲೂಕು ಆಸ್ಪತ್ರೆಗೆ ರವಾನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT