ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಲಿಂಗಸುಗೂರು | 'ಎಸ್‌ಎಸ್ಎಲ್ಸಿ ಪರೀಕ್ಷೆ: ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ'

Published 20 ಮಾರ್ಚ್ 2024, 15:12 IST
Last Updated 20 ಮಾರ್ಚ್ 2024, 15:12 IST
ಅಕ್ಷರ ಗಾತ್ರ

ಲಿಂಗಸುಗೂರು: 25ರಿಂದ ಆರಂಭಗೊಳ್ಳಲಿರುವ ಎಸ್‍.ಎಸ್‍.ಎಲ್‍.ಸಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಜಿಲ್ಲಾಧಿಕಾರಿ ನಿಷೇಧಾಜ್ಞೆ ಹೊರಡಿಸಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ನಕಲು ನಡೆಸುವ, ಪ್ರಶ್ನೆಪತ್ರಿಕೆ ಹರಿಬಿಡುವಂತ ಕೃತ್ಯಗಳ ಬಗ್ಗೆ ಎಚ್ಚರಿಕೆ ವಹಿಸಬೇಕು’ ಎಂದು ತಹಶೀಲ್ದಾರ್ ಮಲ್ಲಪ್ಪ ಯರಗೋಳ ಹೇಳಿದರು.

ಬುಧವಾರ ಎಸ್‍,ಎಸ್‍,ಎಲ್‍.ಸಿ ಪರೀಕ್ಷೆಗಳ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಿದ ಸಿಬ್ಬಂದಿ ಮತ್ತು ಅಧಿಕಾರಿಗಳು ಹೊರತು ಅನ್ಯರಿಗೆ ಪ್ರವೇಶ ನಿರಾಕರಿಸಲಾಗಿದೆ. ಸಿಬ್ಬಂದಿ, ಅಧಿಕಾರಿ, ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ, ನೋಟ್ಸ್‍, ಮೊಬೈಲ್‍, ಕ್ಯಾಲಿಕ್ಯೂಟರ್‍ ತರುವುದನ್ನು ಕೂಡ ನಿಷೇಧಿಸಿದೆ. ಪರೀಕ್ಷಾ ಸಮಯದಲ್ಲಿ ಕೇಂದ್ರದ ಸುತ್ತಮುತ್ತಲಿನ ಝೆರಾಕ್ಸ ಮತ್ತು ಸೈಬರ್ ಕೆಫೆ ಬಂದ್ ಮಾಡಿಸಬೇಕು'’ಎಂದರು.

‘ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ, ಶುದ್ಧ ಕುಡಿಯುವ ನೀರು, ಗಾಳಿ ಬೆಳಕು ಇರುವಂತೆ ನೋಡಿಕೊಳ್ಳಬೇಕು. ಈ ಬಾರಿ ನಾಲ್ಕು ಪರೀಕ್ಷಾ ಕೇಂದ್ರಗಳನ್ನು ಸೂಕ್ಷ್ಮ ಕೇಂದ್ರಗಳನ್ನಾಗಿ ಗುರುತಿಸಲಾಗಿದೆ. ಈ ಬಾರಿ ಬೋರ್ಡ್‌, ರೆಗ್ಯೂಲರ್ ವಿದ್ಯಾರ್ಥಿಗಳ ಜೊತೆಗೆ ಖಾಸಗಿ ವಿದ್ಯಾರ್ಥಿಗಳ ಪರೀಕ್ಷೆ ನಡೆಸುವ ದಿಟ್ಟ ನಿರ್ಧಾರ ತೆಗೆದುಕೊಂಡಿದೆ. ಪರೀಕ್ಷಾ ಪಾವಿತ್ರ್ಯತೆ ಉಳಿಸಿಕೊಳ್ಳುವ ಹೊಣೆಗಾರಿಕೆ ನಿಮ್ಮಗಳ ಮೇಲಿದೆ’ ಎಂದು ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ ಮಾತನಾಡಿ, ‘ಮಕ್ಕಳ ಭವಿಷ್ಯ, ಉತ್ತಮ ಫಲಿತಾಂಶ ತರಲು ಸರಣಿ ಪರೀಕ್ಷೆ ನಡಸಲಾಗಿದೆ. ಮಕ್ಕಳು ಪರೀಕ್ಷಾ ಕೇಂದ್ರಗಳಲ್ಲಿ ಏನಾದರು ತಪ್ಪು ಮಾಡಿದಾಗ ಶಿಕ್ಷಿಸಬೇಡಿ. ಪ್ರೀತಿಯಿಂದ ನೀ ಮಾಡಿರುವುದು ತಪ್ಪು ಎಂಬುದರ ಅರಿವು ಮೂಡಿಸಿ. ಭಯ ಹುಟ್ಟಿಸುವಂತ ವಾತಾವರಣ ನಿರ್ಮಾಣ ಮಾಡಬೇಡಿ. ಮಕ್ಕಳ ಭವಿಷ್ಯ ಮುಂದಿಟ್ಟು ಕರ್ತವ್ಯ ನಿರ್ವಹಿಸಿ’ ಎಂದರು.

ಕ್ಷೇತ್ರ ಸಮನ್ವಯಾಧಿಕಾರಿ ಹನುಮಂತಪ್ಪ ಕುಳಗೇರಿ ಮಾತನಾಡು, ‘ತಾಲ್ಲೂಕಿನಲ್ಲಿ 17 ಪರೀಕ್ಷಾ ಕೇಂದ್ರಗಳಿವೆ. ಪರೀಕ್ಷೆಗೆ 6550 ಮಕ್ಕಳು ದಾಖಲಿಸಿಕೊಂಡಿದ್ದಾರೆ. ಪರೀಕ್ಷೆಯ ಸುರಕ್ಷತೆಗಾಗಿ 21ಜನ ಸ್ಥಿರ ಜಾಗೃತ ಅಧಿಕಾರಿಗಳು, ಮೂರು ವಿಚಕ್ಷಣ ಜಾಗೃತದಳ, 08 ಮಾರ್ಗಾಧಿಕಾರಿಗಳ ತಂಡ, 17 ಮೊಬೈಲ್‍ ಮೇಲ್ವಿಚಾರಣಾಧಿಕಾರಿಗಳು ಹಾಗೂ 350 ಕೊಠಡಿ ಮೇಲ್ವಿಚಾರಕರ ನಿಯೋಜನೆ ಮಾಡಿ ಆದೇಶ ನೀಡಿ, ತರಬೇತಿ ನೀಡಲಾಗಿದೆ’ ಎಂದು ಸಭೆಯ ಗಮನ ಸೆಳೆದರು.

ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು, ಸಹಾಯಕರು, ಜಾಗೃತ ದಳ ಸಿಬ್ಬಂದಿ, ಮೊಬೈಲ್‍ ಮೇಲ್ವಿಚಾರಕರು, ಕೊಠಡಿ ಮೇಲ್ವಿಚಾರಕರು ಭಾಗವಹಿಸಿದ್ದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಅಮರೇಶ ಪಾಟೀಲ ಮಾಕಾಪುರ. ಪಿಎಸ್‍ಐ ವಿರುಪಾಕ್ಷಪ್ಪ, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಪ್ರಾಚಾರ್ಯ ರಾಜಕುಮಾರ ಸೇರಿದಂತೆ ಶಿಕ್ಷಣ ಇಲಾಖೆ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT