ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು | ಎಸ್ಸೆಸ್ಸೆಲ್ಸಿ ಪರೀಕ್ಷೆ: ಮೊದಲ ದಿನ ಸುಸೂತ್ರ

ರಾಯಚೂರು ಜಿಲ್ಲೆಯಲ್ಲಿ 30,228 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರು
Published 25 ಮಾರ್ಚ್ 2024, 14:35 IST
Last Updated 25 ಮಾರ್ಚ್ 2024, 14:35 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಯ 93 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿಯ ‍ಪ್ರಥಮ ಭಾಷೆ ಪರೀಕ್ಷೆ ಸೋಮವಾರ ಸುಸೂತ್ರವಾಗಿ ಜರುಗಿದೆ.

ಈ ಪರೀಕ್ಷೆಗೆ ಒಟ್ಟು 30,228 ವಿದ್ಯಾರ್ಥಿಗಳು ಹಾಜರಾಗಿದ್ದರು. 871 ವಿದ್ಯಾರ್ಥಿಗಳು ಗೈರಾಗಿದ್ದರು.

ಜಿಲ್ಲೆಯ ದೇವದುರ್ಗ ತಾಲ್ಲೂಕಿನಲ್ಲಿ 4,186 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 75 ವಿದ್ಯಾರ್ಥಿಗಳು ಗೈರಾಗಿದ್ದಾರೆ,  ಲಿಂಗಸುಗೂರು ತಾಲ್ಲೂಕಿನಲ್ಲಿ 6,241 ಹಾಜರಾಗಿದ್ದು, 153 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಮಾನ್ವಿ ತಾಲ್ಲೂಕಿನಲ್ಲಿ 5,568 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 184 ವಿದ್ಯಾರ್ಥಿಗಳು ಗೈರಾಗಿದ್ದಾರೆ. ರಾಯಚೂರು ತಾಲ್ಲೂಕಿನಲ್ಲಿ 8,645 ಪರೀಕ್ಷೆಗೆ ಹಾಜರಾಗಿದ್ದರೆ, 300 ವಿದ್ಯಾರ್ಥಿಗಳು ಗೈರಾಗಿದ್ದರು. ಸಿಂಧನೂರು ತಾಲ್ಲೂಕಿನಲ್ಲಿ 5,588 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರೆ, 159 ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT