ಸಿಂಧನೂರು: ನಗರದ ಎಕ್ಸ್‌ಲೆಂಟ್ ಪದವಿ ಮಹಾವಿದ್ಯಾಲಯದಲ್ಲಿ ಆಗಸ್ಟ್ 6ರಂದು ಸಮಾಜಶಾಸ್ತ್ರ ಗೆಳೆಯರ ಬಳಗ ಹಾಗೂ ಎಕ್ಸ್‌ಲೆಂಟ್ ಪದವಿ ಮಹಾವಿದ್ಯಾಲಯದ ಸಹಯೋಗದಲ್ಲಿ ಸಮಾಜಶಾಸ್ತ್ರ ವಿಷಯದ ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ಹಮ್ಮಿಕೊಳ್ಳಲಾಗಿದೆ ಎಂದು ಸದಸ್ಯೆ ಗೌರಿ ವಾಲೀಕಾರ ತಿಳಿಸಿದ್ದಾರೆ.
ಕೆ-ಸೆಟ್, ನೆಟ್, ಪಿಎಚ್‍ಡಿ ಅರ್ಹತಾ ಪರೀಕ್ಷೆ, ಪಿಯು ಉಪನ್ಯಾಸಕ, ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಈ ಸ್ಪರ್ಧಾತ್ಮಕ ಪರೀಕ್ಷೆ ಉಪಯುಕ್ತವಾಗಲಿದೆ. ₹ 100 ಪ್ರವೇಶ ಶುಲ್ಕವಿದ್ದು, ಹೆಸರು ನೋಂದಣಿಗೆ ಆಗಸ್ಟ್ 3 ಕೊನೆ ದಿನ. 100 ಪ್ರಶ್ನೆಗಳಿರಲಿದ್ದು, ಪ್ರತಿ ಪ್ರಶ್ನೆಗೆ ಒಂದು ಅಂಕ. ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿ ಪ್ರಶ್ನೆ ಪತ್ರಿಕೆ ಇರಲಿದೆ. ಆಗಸ್ಟ್ 6ರಂದು ಬೆಳಿಗ್ಗೆ 10.30 ರಿಂದ 12.30 ರವರೆಗೆ ಪರೀಕ್ಷೆ ಬರೆಯಲು ಅವಕಾಶವಿರುತ್ತದೆ. ಈ ಪರೀಕ್ಷೆಯಲ್ಲಿ ಪ್ರಥಮ ಬಹುಮಾನ ₹ 10,001, ದ್ವಿತೀಯ ಬಹುಮಾನ ₹ 5001, ತೃತೀಯ ಬಹುಮಾನ ₹ 2501 ಹಾಗೂ ಪ್ರಮಾಣ ಪತ್ರ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ 6363193050, 9900756171, 8105160024ಗೆ ಸಂಪರ್ಕಿಸಬಹುದು ಎಂದು ವಿವರಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.