ರಾಯಚೂರು: ಜನವರಿ 6 ಹಾಗೂ 7 ರಂದು ದಾವಣಗೆರೆಯಲ್ಲಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್ಎಸ್) ವತಿಯಿಂದ 7ನೇ ರಾಜ್ಯ ಮಟ್ಟದ ಮಹಿಳಾ ಸಮ್ಮೇಳನ ಏರ್ಪಡಿಸಲಾಗಿದೆ ಎಂದು ಸಂಘಟನೆಯ ರಾಜ್ಯ ಸೆಕ್ರೇಟೇರಿಯಟ್ ಸದಸ್ಯೆ ಗುಂಡಮ್ಮ ಮಡಿವಾಳ ತಿಳಿಸಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದು 76 ವರ್ಷ ಕಳೆದರೂ ಮಹಿಳೆಯರ ಮೇಲಿನ ದೌರ್ಜನ್ಯ ನಿಂತಿಲ್ಲ. ಅಪ್ರಾಪ್ತ ಬಾಲಕಿಯರ ಹಾಗೂ ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ ಎಂದು ಶುಕ್ರವಾರ ಮಾಧ್ಯಮ ಗೋಷ್ಠಿಯಲ್ಲಿ ಹೇಳಿದರು.

ಮಹಿಳೆಯರಿಗೆ ಶಿಕ್ಷಣ, ಉದ್ಯೋಗ, ಆರೋಗ್ಯ ಖಚಿತಪಡಿಸಬೇಕು. ದುಡಿಯುವ ಮಹಿಳೆಯರಿಗೆ ಕನಿಷ್ಠ ವೇತನ, ಸೇವಾ ಭದ್ರತೆ ಖಾತ್ರಿಪಡಿಸಬೇಕು ಎನ್ನುವ ಘೋಷ ವಾಕ್ಯಗಳೊಂದಿಗೆ ಎರಡು ದಿನ ಸಮ್ಮೇಳನ ಆಯೋಜಿಸಿ ಮಹಿಳೆಯರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದರು.

ಸಮ್ಮೇಳನದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಲಿದ್ದಾರೆ. ಪ್ರತಿನಿಧಿ ಸಭೆಯಲ್ಲಿ 800 ಮಹಿಳಾ ಮುಖಂಡರು ಭಾಗವಹಿಸುವರು. ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಪದಾಧಿಕಾರಿಗಳಾದ ಸರೋಜಾ ಗೋನವಾರ, ಮೇಘನಾ ಹಾಗೂ ನವನೀತ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.