ಸಿರವಾರ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಲ್ಲಿ ಒಳ ಮೀಸಲಾತಿಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ. ಒಳ ಮೀಸಲಾತಿ ಕಾನೂನು ಬದ್ಧ ಎಂದು ಹೇಳುವ ಮೂಲಕ ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಸುಪ್ರೀಂ ಕೋರ್ಟ್ ತೀರ್ಪಿನಂತೆ ಪರಿಶಿಷ್ಟ ಜಾತಿ ಒಳ ಮೀಸಲಾತಿ ಅನುಷ್ಠಾನಕ್ಕೆ ಆಗ್ರಹಿಸಿ ಸೆಪ್ಟೆಂಬರ್ 9ರಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಎನ್. ಮೂರ್ತಿ ಬಣ)ದಿಂದ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ರಾಯಚೂರು ಜಿಲ್ಲಾ ಘಟಕದ ಅಧ್ಯಕ್ಷ ಆಶೋಕ ನಂಜಲದಿನ್ನಿ ಹೇಳಿದರು.

ಪಟ್ಟಣದಲ್ಲಿ ಭಾನುವಾರ ನಡೆದ ಪ್ರತಿಕಾಗೋಷ್ಠಿಯಲ್ಲಿ ಪ್ರತಿಭಟನೆಯ ಭಿತ್ತಿ ಪತ್ರ ಬಿಡುಗಡೆಗೊಳಿಸಿ ಮಾತನಾಡಿದ ಅವರು,‘ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ವತಿಯಿಂದ ಸೆಪ್ಟೆಂಬರ್ 9ರಂದು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿ ಎದುರು ರಾಜ್ಯಾದ್ಯಂತ ಏಕಕಾಲದಲ್ಲಿ ಪ್ರತಿಭಟನೆ ಕೈಗೊಳ್ಳಲಾಗಿದ್ದು, ಈ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಒಳ ಮೀಸಲಾತಿ ಕೂಡಲೇ ನೀಡುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಬೇಕು’ ಎಂದರು.

ಸಂಘಟನೆಯ ಜಿಲ್ಲಾ ಘಟಕದ ಉಪಾಧ್ಯಕ್ಷ ಎಂ.ಮನೋಹರ, ಹುಲಗಪ್ಪ ಸೈದಾಪುರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ಬೊಮ್ಮನಾಳ, ಸಿರವಾರ ತಾಲ್ಲೂಕು ಘಟಕದ ಅಧ್ಯಕ್ಷ ಚಂದ್ರಪ್ಪ ಕವಿತಾಳ, ಮಾನ್ವಿ ತಾಲ್ಲೂಕು ಘಟಕದ ಅಧ್ಯಕ್ಷ ಮಾರೆಪ್ಪ, ಕವಿತಾಳ ನಗರ ಘಟಕದ ಅಧ್ಯಕ್ಷ ಯಾಕೋಬ ಹುಲಿ, ವಿಜಯ ಕವಿತಾಳ ಹಿರೇಹಣಗಿ, ಜಂಬಣ್ಣ ಗಣದಿನ್ನಿ, ಹನುಮಂತ ಗಣದಿನ್ನಿ, ಹೀರಾ, ಚಿಂಚರಕಿ ಗ್ರಾಮ ಪಂಚಾಯಿತಿ ಘಟಕಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.