ಬುಧವಾರ, ಮಾರ್ಚ್ 29, 2023
27 °C

ಅಂಗವಿಕಲರಿಗೆ ಹೊಲಿಗೆ ಯಂತ್ರ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಟಗಲ್ (ಕವಿತಾಳ): ‘ಸ್ವಯಂ ಉದ್ಯೋಗ ಕೈಗೊಳ್ಳುವ ಮೂಲಕ ಅಂಗವಿಕಲರು ಸ್ವಾವಲಂಬಿ ಜೀವನ ನಡೆಸಬೇಕು’ ಎಂದು ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಬಸವರಾಜ ಹೇಳಿದರು.

ಇಲ್ಲಿನ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಸೋಮವಾರ ನಡೆದ ಅಂಗವಿಕಲರಿಗೆ ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,‘15ನೇ ಹಣಕಾಸು ಯೋಜನೆಯಡಿ ಮೀಸಲಿರಿಸಿದ ಶೇ 5ರಷ್ಟು ಅನುದಾನದಲ್ಲಿ ಅಂದಾಜು 15 ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಗಿದೆ’ ಎಂದರು.

ಜಿಲ್ಲಾ ಪಂಚಾಯಿತಿ ಕೆಡಿಪಿ ನಾಮ ನಿರ್ದೇಶಿತ ಸದಸ್ಯ ಶಿವಕುಮಾರ ಪಾಟೀಲ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಬಸನಗೌಡ ಬಾಲರಡ್ಡಿ, ಸದಸ್ಯರಾದ ಆದನಗೌಡ, ಶಿವಪ್ಪ ಯಕ್ಲಾಸಪುರ, ಮುಖಂಡರಾದ ಬಸವರಾಜ ಪೂಜಾರಿ, ತಿರುಪತಿ ಬಸಾಪುರ, ಹನುಮಂತ, ಮೌನೇಶ, ಗುಂಡಪ್ಪ ಸಾಹುಕಾರ, ಭೀಮಣ್ಣ ನಾಯಕ ಮತ್ತು ಪಂಚಾಯಿತಿ ವ್ಯಾಪ್ತಿಯ ವಟಗಲ್, ಬಸಾಪುರ, ಪರಸಾಪುರ, ಇರಕಲ್ ಮತ್ತು ಯಕ್ಲಾಸಪುರ ಗ್ರಾಮಗಳ ಫಲಾನುಭವಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.