ರಾಯಚೂರು: ನಗರದ ಹಲವು ರಸ್ತೆಗಳಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು, ವಾಹನ ಸವಾರರು ಮತ್ತು ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಪ್ರಮುಖ ರಸ್ತೆಗಳಲ್ಲಿ ಬಿಡಾಡಿ ದನಗಳ ಹಾವಳಿಗೆ ಕಡಿವಾಣ ಬೀಳುತ್ತಿಲ್ಲ.

ರಸ್ತೆಯುದ್ದಕ್ಕೂ ರಾಜಾರೋಷವಾಗಿ ಓಡಾಡುವ ಬಿಡಾಡಿ ದನಗಳು ವಾಹನಗಳಲ್ಲಿ ಸಂಚರಿಸುವವರ ಪ್ರಾಣಕ್ಕೆ ಸಂಚಕಾರ ತಂದೊಡ್ಡುತ್ತಿವೆ. ರಸ್ತೆ ಅಪಘಾತಗಳಿಗೂ ಕಾರಣವಾಗುತ್ತಿದೆ. ಇಷ್ಟಾದರೂ ಸಂಬಂಧಿಸಿದ ಮಹಾನಗರ ಪಾಲಿಕೆ ಅಧಿಕಾರಿಗಳು ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದ್ದಾರೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ಕೇಂದ್ರಕ್ಕೆ ವ್ಯಾಪಾರ-ವಹಿವಾಟಿಗಾಗಿ ನಿತ್ಯ ನೂರಾರು ಜನರು ಬರುತ್ತಾರೆ. ರಾಜ್ಯ ಹೆದ್ದಾರಿಯೂ ನಗರದಲ್ಲಿ ಹಾದು ಹೋಗಿರುವುದರಿಂದ ದಿನವಿಡೀ ಸಾವಿರಾರು ವಾಹನಗಳು ಸಂಚರಿಸುತ್ತವೆ. ಬಿಡಾಡಿ ದನಗಳು ರಾತ್ರಿ ಹಗಲೆನ್ನದೆ ರಸ್ತೆಯ ಮೇಲೆ ಮಲಗಿರುವುದರಿಂದ ಅಪಘಾತಗಳು ಸಂಭವಿಸಿ ಹಲವಾರು ದ್ವಿಚಕ್ರವಾಹನ ಸವಾರರು ಗಾಯಗೊಂಡ ಘಟನೆಗಳು ನಡೆದಿವೆ. ಈ ಕುರಿತು ಎಚ್ಚರವಹಿಸಬೇಕಾದ ಪೊಲೀಸ್ ಇಲಾಖೆ ಹಾಗೂ ಮಹಾನಗರ ಪಾಲಿಕೆ ನಿದ್ರೆಗೆ ಜಾರಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ಬೀದಿ ಬದಿಯ ಹೂವು-ಹಣ್ಣು ಸೇರಿದಂತೆ ಇತರೆ ದಿನಸಿ ವ್ಯಾಪಾರಿಗಳು ಕೂಡ ಬಿಡಾಡಿ ದನಗಳ ಹಾವಳಿಗೆ ಬೇಸತ್ತು ಹೋಗಿದ್ದಾರೆ. ವ್ಯಾಪಾರ ನಡೆಸುವುದೇ ದುಸ್ತರವಾಗಿದೆ. ಸ್ವಲ್ಪ ಯಾಮಾರಿದರೂ ತರಕಾರಿಗಳಿಗೆ ಬಾಯಿ ಹಾಕಿ ಚೆಲ್ಲಾಪಿಲ್ಲಿ ಮಾಡುತ್ತವೆ. ನಿತ್ಯವೂ ತೊಂದರೆ ಅನುಭವಿಸುವಂತಾಗಿದೆ ಎಂದು ತರಕಾರಿ ವ್ಯಾಪಾರಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.

ಪೊಲೀಸ್ ಇಲಾಖೆ ಹಾಗೂ ಮಹಾನಗರ ಪಾಲಿಕೆ ಆಡಳಿತ ಕೂಡಲೇ ಎಚ್ಚೆತ್ತುಕೊಂಡು ಬಿಡಾಡಿ ದನಗಳ ಮಾಲೀಕರಿಗೆ ನೋಟಿಸ್ ಜಾರಿ ಮಾಡಿ ದನಗಳ ನಿಯಂತ್ರಣಕ್ಕೆ ಮುಂದಾಗಬೇಕಿದೆ.

ಬಿಡಾಡಿ ದನಗಳ ಮಾಲೀಕರನ್ನು ಪತ್ತೆಹಚ್ಚಿ ಎಚ್ಚರಿಕೆ ನೀಡುವುದರೊಂದಿಗೆ ದಂಡ ವಿಧಿಸುವ ಕೆಲಸವೂ ಆಗಬೇಕಾಗಿದೆ. ಮುಖ್ಯವಾಗಿ ರಸ್ತೆಯಲ್ಲಿ ಬೀಡು ಬಿಟ್ಟಿರುವ ಜಾನುವಾರುಗಳನ್ನು ಹಿಡಿದು ಬೇರೆಡೆ ಸಾಗಿಸುವ ಕೆಲಸ ಆಗಬೇಕು ಎಂದು ತರಕಾರಿ ವ್ಯಾಪಾರಿ ರಾಮು ಒತ್ತಾಯಿಸಿದ್ದಾರೆ.

ಎಲ್ಲೆಂದರಲ್ಲಿ ಓಡಾಡುವ ಈ ದನ-ಕರುಗಳು ಸಿಕ್ಕಿದ್ದನ್ನು ತಿನ್ನುತ್ತವೆ. ಕಸದೊಂದಿಗೆ ಪ್ಲಾಸ್ಟಿಕ್ ಕೂಡ ಅವುಗಳ ಹೊಟ್ಟೆ ಸೇರುತ್ತಿದೆ. ಇದು ಅವುಗಳ ಪ್ರಾಣಕ್ಕೂ ಕುತ್ತು ತರುತ್ತಿದೆ. ವಾಹನಗಳು ಡಿಕ್ಕಿಯಾಗುವುದರಿಂದಲೂ ಜೀವಕ್ಕೆ ಕಂಟಕವಿದೆ. ಸವಾರರು ಕೂಡ ಗಾಯಗೊಂಡ ಉದಾಹರಣೆಗಳಿವೆ. ರಸ್ತೆಗಳ ಮಧ್ಯೆ 'ಕೃತಕ ಸ್ಪೀಡ್ ಬ್ರೇಕರ್'ಗಳ ರೀತಿಯಲ್ಲಿರುವ ಅವುಗಳನ್ನು ಹಿಡಿದು ಬೇರೆಗೆ ಸಾಗಿಸಬೇಕು ಎನ್ನುವುದು ಸಾರ್ವಜನಿಕರ ಆಗ್ರಹ.

ಬಿಡಾಡಿ ದನಗಳನ್ನು ರಸ್ತೆಯಲ್ಲಿ ಬಿಡದಂತೆ ಮಾಲೀಕರಿಗೆ ಎಚ್ಚರಿಕೆ ನೀಡಿ ನೋಟಿಸ್ ನೀಡಲಾಗುತ್ತದೆ. ಅವರು ಎಚ್ಚತ್ತುಗೊಳ್ಳದಿದ್ದರೆ ದನಗಳನ್ನು ಗೋ ಶಾಲೆಗೆ ಬಿಡಲಾಗುವುದು.
– ಜುಬಿನ್ ಮೊಹಾಪಾತ್ರ, ಮಹಾನಗರ ಪಾಲಿಕೆ ಆಯುಕ್ತ

ನಗರದಲ್ಲಿ ಎಲ್ಲೆಂದರಲ್ಲಿ ದನಗಳು ರಸ್ತೆಗೆ ಅಡ್ಡಲಾಗಿ ನಿಂತಿರುತ್ತವೆ. ಸಂಚಾರ ಪೊಲೀಸರು ಕಂಡರೂ ಕಾಣದಂತೆ ಹೋಗಿಬಿಡುತ್ತಾರೆ. ಆದರೆ ಪಾಲಿಕೆ ಮಾತ್ರ ಗಂಭೀರ ಕ್ರಮ ಕೈಗೊಳ್ಳುತ್ತಿಲ್ಲ.
– ಬಸವರಾಜ ಮಡ್ಡಿಪೇಟೆ ನಿವಾಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.