ಶನಿವಾರ, ಮಾರ್ಚ್ 25, 2023
22 °C

ತುರ್ವಿಹಾಳ: ಬೀದಿನಾಟಕ ಪ್ರದರ್ಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುರ್ವಿಹಾಳ: ಸಮಾಜ ಕಲ್ಯಾಣ ಇಲಾಖೆ ಹಾಗೂ ಸಿಂಧನೂರಿನ ಸಿಂಚನ ಸಾಂಸ್ಕೃತಿಕ ಕಲಾ ಸಂಘದ ಸಹಯೋಗದಲ್ಲಿ ಬೀದಿನಾಟಕ ಪ್ರದರ್ಶಿಸುವ ಮೂಲಕ ಅಸ್ಪೃಶ್ಯತೆಯ ಕುರಿತು ಜಾಗೃತಿ ಮೂಡಿಸಲಾಯಿತು.

ಪಟ್ಟಣದ ಸಂತೆ ಮೈದಾನದಲ್ಲಿ ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕಿ ವಿಜಯಲಕ್ಷ್ಮಿ ತಮಟೆ ಬಾರಿಸುವ ಮೂಲಕ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು,‘ಜಾತಿ ಪದ್ಧತಿಯನ್ನು ಕೈಬಿಟ್ಟು ಎಲ್ಲರೂ ಸಮಾನವಾಗಿ ಜೀವನ ಸಾಗಿಸಬೇಕು. ಅಸ್ಪೃಶ್ಯತೆ ಎನ್ನುವುದು ಸಮಾಜಕ್ಕೆ ಅಂಟಿದ ದೊಡ್ಡ ಪಿಡುಗು. ಅದನ್ನು ನಿರ್ಮೂಲನೆ ಮಾಡಲು ನಾವೆಲ್ಲರೂ ಸೌಹಾರ್ದದಿಂದ ಬದುಕಬೇಕು. ಆಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ’ ಎಂದು ಹೇಳಿದರು

ಕಲಾ ತಂಡದ ಮೌಲಪ್ಪ ಮಾಡಸಿರಿವಾರ, ರಮೇಶ, ಶಿವಪುತ್ರಪ್ಪ ಹಾಗೂ ಸಾರ್ವಜನಿಕರು ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.