ಕೊರೊನಾ: ಬೀದಿ ನಾಟಕ ಪ್ರದರ್ಶನ

ಶಕ್ತಿನಗರ: ಕೊರೊನಾ ಸೋಂಕಿನಿಂದಾಗಿ ಎಲ್ಲರ ಬದುಕು ಸಂಕಷ್ಟದಲ್ಲಿದೆ. ಇಂಥ ಸಂದಿಗ್ಧ ಸ್ಥಿತಿಯಲ್ಲಿ ಎಚ್ಚರಿಕೆಯ ನಡೆ ಅಗತ್ಯ ಎಂದು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ರಘುಪತಿಗೌಡ ಹೇಳಿದರು.
ರಾಯಚೂರು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಸಹಯೋಗದಲ್ಲಿ ದೇವಸೂಗೂರು ವಲಯದ ಮಹಿಳಾ ಜ್ಞಾನವಿಕಾಶ ಕಾರ್ಯಕ್ರಮದಡಿಯಲ್ಲಿ ಡಿ.ಯದ್ಲಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ಕೊರೊನಾ ಜಾಗೃತಿ ಬೀದಿನಾಟಕ ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಾರ್ವಜನಿಕ ಸ್ಥಳಗಳು ಹಾಗೂ ಮಾರುಕಟ್ಟೆಗಳಲ್ಲಿ ಅಂತರ ಕಾಯ್ದುಕೊಳ್ಳಬೇಕು. ಮನೆಯಿಂದ ಹೊರ ಬರುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಕೈಗಳ ಸ್ವಚ್ಛತೆಗೆ ಸ್ಯಾನಿಟೈಸರ್ ಬಳಸಬೇಕು ಎಂದು ಕಿವಿಮಾತು ಹೇಳಿದರು.
ವೇದಿಕೆಯಲ್ಲಿ ಮುಖಂಡರಾದ ಸುರೇಶ ಚೋಟು, ಪ್ರಕಾಶಯ್ಯ ನಂದಿ, ರಂಗ ನಿರ್ದೇಶಕ ರಂಜಾನಸಾಬ್ ಉಳ್ಳಾಗಡ್ಡಿ, ಕಲಾವಿದ ವೆಂಕಟ ನರಸಿಂಹಲು, ರೋಟರಿ ಕ್ಲಬ್ ಕಾರ್ಯದರ್ಶಿ ಮಹೇಶ ಪೊಲೀಸ್ ಪಾಟೀಲ್, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ದೇವಸೂಗೂರು ವಲಯದ ಮೇಲ್ವಿಚಾರಕ ಅನಿಲಕುಮಾರ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ವೆಂಕಟಮಾಲ, ಸೇವಾ ಪ್ರತಿನಿಧಿಗಳು ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.