ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾನ್ವಿ: ‘ತಳಮಟ್ಟದಲ್ಲಿ ಪಕ್ಷದ ಬಲವರ್ಧನೆ ಮಾಡಿ’

ಆಮ್ ಆದ್ಮಿ ಪಾರ್ಟಿ ತಾಲ್ಲೂಕು ಪದಾಧಿಕಾರಿಗಳ ಪದಗ್ರಹಣ
Last Updated 30 ಜೂನ್ 2022, 14:01 IST
ಅಕ್ಷರ ಗಾತ್ರ

ಮಾನ್ವಿ: ‘ನೈಜ ಅಭಿವೃದ್ಧಿಪರ ಚಿಂತನೆ ಹಾಗೂ ಜನಪರ ಕಾಳಜಿ ಹೊಂದಿರುವ ಆಮ್ ಆದ್ಮಿ ಪಾರ್ಟಿಯನ್ನು ತಳಮಟ್ಟದಲ್ಲಿ ಸಂಘಟಿಸಲು ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಶ್ರಮಿಸಬೇಕು’ ಆಮ್ ಆದ್ಮಿ ಪಾರ್ಟಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜಾ ಶ್ಯಾಮಸುಂದರ ನಾಯಕ ಕರೆ ನೀಡಿದರು.

ಗುರುವಾರ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಆಮ್ ಆದ್ಮಿ ಪಾರ್ಟಿಯ ನೂತನ ತಾಲ್ಲೂಕು ಘಟಕದ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಾರ್ಟಿ ದೇಶದ ಜನರಲ್ಲಿ ಹೊಸ ಭರವಸೆಯ ಆಶಾಕಿರಣವಾಗಿದೆ. ದೆಹಲಿ ಮತ್ತು ಪಂಜಾಬ್ ರಾಜ್ಯಗಳಲ್ಲಿ ಆಮ್ ಆದ್ಮಿ ಪಾರ್ಟಿ ಸರ್ಕಾರಗಳು ಜಾರಿಗೆ ತಂದಿರುವ ಜನಪರ ಯೋಜನೆಗಳು ಪಕ್ಷದ ಆಡಳಿತದ ಬದ್ಧತೆಗೆ ಸಾಕ್ಷಿಯಾಗಿವೆ‘ಎಂದರು.

‘ಜನತೆಗೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಲು ಶಿಕ್ಷಣ, ಆರೋಗ್ಯ, ಸಾರಿಗೆ, ವಿದ್ಯುತ್ ಸೇರಿದಂತೆ ಇತರ ಕ್ಷೇತ್ರಗಳಲ್ಲಿ ಮಹತ್ವದ ಬದಲಾವಣೆಗಳನ್ನು ತರಲಾಗಿದೆ. ರಾಜ್ಯದ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ ಗಮನಾರ್ಹ ಸಾಧನೆ ಮಾಡುವ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಪಕ್ಷದ ಸಾಧನೆಗಳು ಹಾಗೂ ಯೋಜನೆಗಳ ಕುರಿತು ಜನಜಾಗೃತಿ ಮೂಡಿಸಬೇಕು’ ಎಂದು ಸಲಹೆ ನೀಡಿದರು.

ಆಮ್ ಆದ್ಮಿ ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಕೆಳಗೇರಿ ಶರಣೇಗೌಡ ಬಲ್ಲಟಗಿ ಮತ್ತಿತರ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದರು.

ಆಮ್ ಆದ್ಮಿ ಪಾರ್ಟಿ ರಾಯಚೂರು ನಗರ ಘಟಕದ ಅಧ್ಯಕ್ಷ ವೀರೇಶ ಯಾದವ್, ಸಿಂಧನೂರು ತಾಲ್ಲೂಕು ಅಧ್ಯಕ್ಷ ಸಂಗ್ರಾಮ ಕಿಲ್ಲೇದ್, ಇತರ ಪದಾಧಿಕಾರಿಗಳಾದ ಕೃಷ್ಣ ವಕೀಲ ಸಿಂಧನೂರು, ವೀರೇಶ ರಾರಾವಿ, ಸೈಯದ್ ಸಜ್ಜಾದ್ ಹುಸೇನ ಮತವಾಲೆ, ಬಾಬಾ ಮೇಸ್ತ್ರಿ, ನಾಗರಾಜ ಕೋರಿ, ಯೂಸುಫ್ ಖುರೇಷಿ, ಸೈಯದ್ ತಾಹೇರ ಹುಸೇನ ಮತವಾಲೆ, ರಾಮಾಂಜನೇಯ ಯಾದವ್, ಚರಣರಾಜ್ ನಾಯಕ, ಮಕ್ಬೂಲ್ ಮಾನ್ವಿ, ಮುಜಮಿಲ್ ಮಾನ್ವಿ, ರಾಜಾ ವಿಜಯಕುಮಾರ ನಾಯಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT