ರಾಯಚೂರು: ‘ಪೂರ್ಣಿಮಾ ಪಿಯು ಕಾಲೇಜ್ ವೇದಾಂತ ಪದವಿ ಕಾಲೇಜ್ ಹಾಗೂ ಭಾರತ ಜ್ಞಾನ ವಿಜ್ಞಾನ ಸಮಿತಿ ಸಹಯೋಗದಲ್ಲಿ ಎಸ್ಎಸ್ಎಲ್ಸಿ ಅಭ್ಯಾಸ ಪುಸ್ತಕ ವಿತರಣೆ ಕಾರ್ಯಕ್ರಮ ರಾಯಚೂರು ತಾಲ್ಲೂಕಿನ ಸಗಮಕುಂಟ. ಗಿಲ್ಲೆಸೂರ್. ಗುಂಜಹಳ್ಳಿ ಹಾಗೂ ಯರಗೇರ ಸರ್ಕಾರಿ ಪ್ರೌಢಶಾಲೆಗಳಲ್ಲಿ ನಡೆಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಈರಣ್ಣ ಕೋಸಗಿ ಮಾತನಾಡಿ, ‘ಎಸ್ಎಸ್ಎಲ್ಸಿ ವಿದ್ಯಾಭ್ಯಾಸದ ಮೈಲುಗಲ್ಲು ಇದನ್ನು ಉತ್ತೀರ್ಣ ಆಗುವ ಮೂಲಕ ಮುಂದಿನ ಭವಿಷ್ಯ ಕಟ್ಟಿಕೊಳ್ಳಲು ಅನುಕೂಲವಾಗುತ್ತದೆ. ಈಗ ಅಭ್ಯಾಸಕ್ಕೆ ಹೆಚ್ಚಿನ ಸಮಯ ಕೊಡಬೇಕು’ ಎಂದರು.

‘ದೊಡ್ಡ ಕನಸನ್ನು ಕಂಡು ಗುರಿಯತ್ತ ಮುನ್ನಡೆಯಬೇಕು. ತಂದೆ ತಾಯಿ ತಮ್ಮ ಮಕ್ಕಳ ಭವಿಷ್ಯ ಉಜ್ವಲವಾಗಲಿ ಎಂಬ ಕನಸು ಕಟ್ಟಿ ಕಷ್ಟಪಟ್ಟು ಶಾಲೆಗೆ ಕಳಿಸುತ್ತಾರೆ. ವಿದ್ಯಾರ್ಥಿಗಳು ಪಾಲಕರ ವಿಶ್ವಾಸ ಉಳಿಸಿಕೊಳ್ಳಬೇಕು‘ ಎಂದು ಹೇಳಿದರು.

ವೇದಾಂತ ಕಾಲೇಜಿನ ಪ್ರಾಚಾರ್ಯ ಮಾತನಾಡಿದರು. ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.