ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ: ಸಿಐಡಿ ವಶಕ್ಕೆ ಆರೋಪಿ

Last Updated 24 ಏಪ್ರಿಲ್ 2019, 13:07 IST
ಅಕ್ಷರ ಗಾತ್ರ

ರಾಯಚೂರು: ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಕೊಲೆ ಪ್ರಕರಣದಲ್ಲಿ ಪೊಲೀಸರು ಬಂಧಿಸಿರುವ ಆರೋಪಿ ಸುದರ್ಶನ ಯಾದವ್‌ನನ್ನು ಸಿಐಡಿ ಅಧಿಕಾರಿಗಳು ಬುಧವಾರ ವಶಕ್ಕೆ ಪಡೆದಿದ್ದಾರೆ.

ಆರೋಪಿಯನ್ನು ವಿಚಾರಣೆಗೆ ಒಳಪಡಿಸಲು 10 ದಿನಗಳವರೆಗೆ ವಶಕ್ಕೆ ನೀಡುವಂತೆ ಸಿಐಡಿಯಿಂದ ಅರ್ಜಿ ಸಲ್ಲಿಸಲಾಗಿತ್ತು. ಆದರೆ, ಆರೋಪಿಯನ್ನು ನಾಲ್ಕು ದಿನ ಸಿಐಡಿ ವಶಕ್ಕೆ ನೀಡಿ ಜೆಎಂಎಫ್‌ಸಿ ಮೂರನೇ ನ್ಯಾಯಾಲಯವು ಆದೇಶ ನೀಡಿತು. ಪೊಲೀಸ್‌ ಕಸ್ಟಡಿಯಿಂದ ಸುದರ್ಶನ ಯಾದವ್‌ನನ್ನು ಸಿಐಡಿ ತಂಡದವರು ವಶಕ್ಕೆ ತೆಗೆದುಕೊಂಡು ವಿಚಾರಣೆಗಾಗಿ ಕರೆದೊಯ್ದಿದ್ದು, ಪ್ರಕರಣದ ತನಿಖೆ ಚುರುಕುಗೊಳಿಸಿದ್ದಾರೆ.

ವಿದ್ಯಾರ್ಥಿಗಳಿಂದ ಪ್ರತಿಭಟನೆ: ಎಂಜಿನಿಯರಿಂಗ್‌ ವಿದ್ಯಾರ್ಥಿನಿಯನ್ನು ಕ್ರೂರವಾಗಿ ಕೊಲೆ ಮಾಡಿದ ಆರೋಪಿಗಳನ್ನು ಶೀಘ್ರ ಪತ್ತೆ ಹಚ್ಚಬೇಕು. ಆರೋಪಿಗಳಿಗೆ ಅತ್ಯುಗ್ರ ಶಿಕ್ಷೆಯನ್ನು ವಿಧಿಸಲು ಸಾಧ್ಯವಾಗಲು ಪ್ರಕರಣದ ವಿಚಾರಣೆಗಾಗಿ ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ ರಚಿಸಬೇಕು ಎಂದು ಒತ್ತಾಯಿಸಿ ‘ಜಸ್ಟಿಸ್‌ ಫಾರ್‌ ಮಧು’ ಹೋರಾಟ ಸಮಿತಿ ನೇತೃತ್ವದಲ್ಲಿ ರಾಯಚೂರು ಸೇರಿದಂತೆ ರಾಜ್ಯದ ವಿವಿಧೆಡೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಪ್ರಕರಣ ಕುರಿತು ನಿಷ್ಪಕ್ಷಪಾತವಾಗಿ ಹಾಗೂ ಯಾವುದೇ ಪ್ರಭಾವಕ್ಕೆ ಒಳಗಾಗದೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.ಏಪ್ರಿಲ್‌ 25 ರಂದು ವಿಶ್ವಕರ್ಮ ಸಮಾಜದ ಸಂಘಟನೆಗಳು ರಾಜ್ಯದ ವಿವಿಧೆಡೆ ಪ್ರತಿಭಟನೆ ನಡೆಸಲಿವೆ.

ಇನ್ನಷ್ಟು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT