ಮಾನ್ವಿ: ‘ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗಾವಕಾಶಕ್ಕಾಗಿ ವಿದ್ಯಾರ್ಥಿಗಳು ವಿವಿಧ ಕೌಶಲಗಳನ್ನು ರೂಢಿಸಿಕೊಳ್ಳಬೇಕು’ ಎಂದು ಪ್ರಾಂಶುಪಾಲ ಜೆ.ಎಲ್.ಈರಣ್ಣ ಹೇಳಿದರು.

ಪಟ್ಟಣದ ಬಾಷುಮಿಯಾ ಸಾಹುಕಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶ (ಐಕ್ಯೂಎಸಿ), ವಾಣಿಜ್ಯ ಶಾಸ್ತ್ರ ವಿಭಾಗ ಹಾಗೂ ಬಾಸ್ಕೊ ಕಂಪನಿ ಸಹಯೋಗದಲ್ಲಿ ಈಚೆಗೆ ಹಮ್ಮಿಕೊಳ್ಳಲಾಗಿದ್ದ ಬ್ರಿಡ್ಜ್ ಕೋರ್ಸ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ವಿದ್ಯಾರ್ಥಿಗಳು ಭಾಷೆ ಮತ್ತು ವೃತ್ತಿಗೆ ಸಂಬಂಧಿಸಿದ ಕೌಶಲಗಳನ್ನು ಕಲಿಯಬೇಕು’ ಎಂದು ಸಲಹೆ ನೀಡಿದರು.

ಬಾಸ್ಕೊ ಕಂಪನಿಯ ಸಂಪನ್ಮೂಲ ವ್ಯಕ್ತಿ ರಾಜೇಶ್ ಮಾತನಾಡಿ ವಿದ್ಯಾರ್ಥಿಗಳಿಗೆ ಕೌಶಲಗಳ ಮಹತ್ವದ ಕುರಿತು ವಿವರಿಸಿದರು.

ವಿದ್ಯಾರ್ಥಿಗಳಿಗೆ ಬಾಸ್ಕೊ ಕಂಪನಿ ವತಿಯಿಂದ ಸಂಪನ್ಮೂಲ ಕಿಟ್ಗಳನ್ನು ವಿತರಿಸಲಾಯಿತು.

ಐಕ್ಯೂಎಸಿ ಸಂಚಾಲಕ ಶಶಿಧರ್, ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಸುಧಾ.ಆರ್, ಇತಿಹಾಸ ವಿಭಾಗದ ಮುಖ್ಯಸ್ಥೆ ಶೋಭಾ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಪದ್ಮಾ ನಿರೂಪಿಸಿದರು. ಸೋನಿಯಾ ಸ್ವಾಗತಿಸಿದರು. ವಿರೂಪಾಕ್ಷಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.