ಸೋಮವಾರ, ಆಗಸ್ಟ್ 8, 2022
22 °C

ರಿಮ್ಸ್ ವೈದ್ಯರ ಮೇಲೆ ಹಲ್ಲೆ: ವೈದ್ಯ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani Photo

ರಾಯಚೂರು: ನಗರದ ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ (ರಿಮ್ಸ್) ಆಸ್ಪತ್ರೆಯಲ್ಲಿ ಶುಕ್ರವಾರ ತಡರಾತ್ರಿ ಇಬ್ಬರು ವೈದ್ಯರ ಮೇಲೆ ರೋಗಿ ಸಂಬಂಧಿಗಳು ಹಲ್ಲೆ ನಡೆಸಿದ್ದು, ಘಟನೆ ವಿರುದ್ಧ ಕಾನೂನುಕ್ರಮಕ್ಕೆ ಒತ್ತಾಯಿಸಿ ವೈದ್ಯ ವಿದ್ಯಾರ್ಥಿಗಳು (ಇಂಟರ್ನಿ) ಆಸ್ಪತ್ರೆ ಎದುರು ಪ್ರತಿಭಟನೆ ಆರಂಭಿಸಿದ್ದಾರೆ.

ರಿಮ್ಸ್ ನಿರ್ದೇಶಕರು ಸ್ಥಳಕ್ಕೆ ಬರುವಂತೆ ಒತ್ತಾಯ ಆರಂಭಿಸಿದ್ದಾರೆ. ಆಸ್ಪತ್ರೆಗೆ ಕರೆತರಲಾಗಿದ್ದ ರೋಗಿಯೊಬ್ಬರು ನಿಧನರಾಗಿದ್ದರಿಂದ ಆಕ್ರೋಶಗೊಂಡ ಸಂಬಂಧಿಗಳು, ರಾತ್ರಿಪಾಳಿಯಲ್ಲಿ ನಿಯೋಜಿಸಲಾಗಿದ್ದ ಇಬ್ಬರು ಇಂಟರ್ನಿ ಪುರುಷ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಹಲ್ಲೆಗೊಳಗಾದ ವೈದ್ಯರಿಗೆ ಏನಾಗಿದೆ ಹಾಗೂ ಯಾರು ಹಲ್ಲೆ ಮಾಡಿದ್ದಾರೆ ಎಂಬುದರ ಮಾಹಿತಿ ಇನ್ನೂ ಗೊತ್ತಾಗಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು