ಶನಿವಾರ, ಜುಲೈ 31, 2021
28 °C

ರಾಯಚೂರು: ಲ್ಯಾಪ್‌ಟಾಪ್ ವಿತರಣೆಗೆ ಆಗ್ರಹಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿರುವ ದ್ವಿತೀಯ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ ಮಾಡಬೇಕೆಂದು ಒತ್ತಾಯಿಸಿ ಆಲ್ ಇಂಡಿಯಾ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್‌ಒ) ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

2019–20ನೇ ಸಾಲಿನ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡುತ್ತಿರುವುದು ಸಂತೋಷದ ವಿಷಯ. ಆದರೆ, ದ್ವಿತೀಯ ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಈ ಯೋಜನೆಯ ಫಲ ಸಿಗದೇ ಇರುವುದು ವಿಷಾದನೀಯ ಎಂದು ಜಿಲ್ಲಾಧಿಕಾರಿ ಮೂಲಕ ಕಲಬುರ್ಗಿ ಶಿಕ್ಷಣ ಇಲಾಖೆ ಪ್ರಾದೇಶಿಕ ಕಚೇರಿಯ ಜಂಟಿ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.

ಅಂತಿಮ ವರ್ಷದ ವಿದ್ಯಾರ್ಥಿಗಳು ತಮ್ಮ ಪದವಿ ಮುಗಿಸಿಕೊಂಡು ಇನ್ನೂ ಕೇವಲ ಎರಡು ತಿಂಗಳಲ್ಲಿ ಹೊರ ಹೋಗುತ್ತಾರೆ. ಅವರಿಗೆ ಉಚಿತ ಲ್ಯಾಪ್ ಟಾಪ್ ನೀಡುವುದರಿಂದ ಮುಂದಿನ ಉನ್ನತ ವ್ಯಾಸಂಗ ನಡೆಸಲು ಅನುಕೂಲವಾಗುತ್ತದೆ. ತಮ್ಮ ಇಲಾಖೆಯು ಉಚಿತ ಲ್ಯಾಪ್ ಟಾಪ್ ನೀಡುವ ಯೋಜನೆ ಈ ವಿದ್ಯಾರ್ಥಿಗಳನ್ನು ಒಳಗೊಳ್ಳಬೇಕಾಗಿತ್ತು. ಆದರೆ, ಕೇವಲ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ನೀಡಿ, ದ್ವಿತೀಯ ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ನೀಡದಿದ್ದರೆ ತಾರತಮ್ಯ ಮಾಡಿದಂತಾಗುತ್ತದೆ ಎಂದು ಆರೋಪಿಸಿದರು.

ಆದ್ದರಿಂದ ಈ ತಾರತಮ್ಯತೆ ಸರಿಪಡಿಸಲು ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ನೀಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.

ಮಲ್ಲನಗೌಡ, ರಮೇಶ, ಸುದರ್ಶನ, ಆನಂದ, ಮೋಹನ್‌, ಸಣ್ಣವಿರೇಶ, ರವಿ,ಶೋಭಾ, ರೇವತಿ, ಚೈತ್ರಾ, ಶೃತಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು