ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು: ಬುದ್ಧಿನ್ನಿ ಪ್ರೌಢಶಾಲೆ ಮಂಜೂರಿಗೆ ಒತ್ತಾಯ

Last Updated 27 ಅಕ್ಟೋಬರ್ 2021, 14:19 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಯ ಮಸ್ಕಿ ತಾಲ್ಲೂಕಿನ ಎಸ್.ಬುದ್ದಿನ್ನಿ ಗ್ರಾಮಕ್ಕೆ ಪ್ರೌಢಶಾಲೆ ಮಂಜೂರು ಮಾಡಬೇಕು ಎಂದು ಒತ್ತಾಯಿಸಿ ಭಾರತೀಯ ವಿದ್ಯಾರ್ಥಿ ಪರಿಷತ್ (ಎಸ್‍ಎಫ್‍ಐ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಶಿಕ್ಷಣ ಸಚಿವರಿಗೆ ಬುಧವಾರ ಮನವಿ ಸಲ್ಲಿಸಿದರು.

ಬುದ್ದಿನ್ನಿ ಗ್ರಾಮದ ಸುತ್ತಮುತ್ತಲಿನ ಎಂಟು ಗ್ರಾಮಗಳ 120ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಪ್ರೌಢಶಾಲೆ ಅಗತ್ಯವಿದೆ. ಬುದ್ದಿನ್ನಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯನ್ನು 14 ವರ್ಷಗಳ ಹಿಂದೆಯೇ ಉನ್ನತೀಕರಿಸಿದ್ದು, ಪ್ರಸಕ್ತ ಸಾಲಿನಲ್ಲಿ 8ನೇ ತರಗತಿಗೆ 122 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. 9ನೇ ತರಗತಿ ಪ್ರವೇಶಕ್ಕೆ ಸಮಸ್ಯೆಯಾಗುತ್ತಿದೆ ಎಂದು ಹೇಳಿದರು.

2017-18ನೇ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ)ಯಿಂದ ₹1.40 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಿಸಲಾಗಿದೆ. ಆದರೆ, ಪ್ರೌಢಶಾಲೆ ಮಂಜೂರಾಗಿಲ್ಲ. ಕಟ್ಟಡ ಇದ್ದರೂ ಈಗ ನಿರುಪಯುಕ್ತವಾಗಿದೆ ಎಂದು ದೂರಿದರು.

ಕೂಡಲೇ ಪ್ರೌಢಶಾಲೆ ಮಂಜೂರು ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಎಸ್‍ಎಫ್‍ಐ ರಾಜ್ಯ ಉಪಾಧ್ಯಕ್ಷ ಶಿವಕುಮಾರ ಮ್ಯಾಗಳಮನಿ, ಜಿಲ್ಲಾಧ್ಯಕ್ಷ ರಮೇಶ ವೀರಾಪೂರು, ಜಿಲ್ಲಾ ಕಾರ್ಯದರ್ಶಿ ಲಿಂಗರಾಜ್ ಕಂದಗಲ್, ಬುದ್ದಿನ್ನಿ ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷ ನಾಗರೆಡ್ಡೆಪ್ಪ ದೇವರಮನಿ, ಉಪಾಧ್ಯಕ್ಷ ಹನುಮಂತ ಬುದ್ದಿನ್ನಿ, ಬಸವರಾಜ ದೀನಸಮುದ್ರ, ಮೌನೇಶ ಬುಳ್ಳಾಪೂರು, ತಿಪ್ಪಣ್ಣ ನಿಲೋಗಲ್, ಎಐಕೆಎಸ್‍ನ ಚಂದ್ರಶೇಖರ ಕ್ಯಾತನಹಟ್ಟಿ, ಬಸವರಾಜ್ ಗುತ್ತೇದಾರ್, ದೇವೇಂದ್ರಪ್ಪ ಕನಸಾವಿ, ಮೌನೇಶ ದೇವರಮನಿ, ಬಾಲಪ್ಪ ಪಾಲೇದ್, ಸಂಗೀತಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT