ರಾಯಚೂರು: ‘ಉತ್ತರ ಕರ್ನಾಟಕದಲ್ಲಿಯೇ ಅತ್ಯಂತ ಹಿಂದುಳಿದ ಜಿಲ್ಲೆಯಾಗಿರುವ ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸಬೇಕು. ಈ ಬೇಡಿಕೆಯನ್ನು ಇಟ್ಟುಕೊಂಡು ನಡೆಯುತ್ತಿರುವ ಸತ್ಯಾಗ್ರಹದಲ್ಲಿ ನಾನು ಪಾಲ್ಗೊಳ್ಳುತ್ತೇನೆ’ ಎಂದು ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರು ಹೇಳಿದರು.
ರಾಯರ ಪಟ್ಟಾಭಿಷೇಕ ನಿಮಿತ್ತ ಬುಧವಾರ ಮಂತ್ರಾಲಯದಲ್ಲಿ ನಡೆದ ಕಾರ್ಯಕ್ರಮದ ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದರು.
ಏಮ್ಸ್ ಬೇಡಿಕೆಯನ್ನಿಟ್ಟುಕೊಂಡು 284 ದಿನಗಳಿಂದ ನಡೆಸುತ್ತಿರುವ ಧರಣಿಗೆ ಈಗಾಗಲೇ ಬೆಂಬಲ ಸೂಚಿಸಲಾಗಿತ್ತು. ಆದರೆ ಸರ್ಕಾರ ಏಮ್ಸ್ ಮಾದರಿ ಮಾಡುತ್ತೇವೆ ಎಂದು ಹೇಳಿರುವುದನ್ನು ಒಪ್ಪಲಾಗದು. ಈಗಾಗಲೇ ಐಐಟಿ ಬೇರೆ ಜಿಲ್ಲೆಗೆ ಕೊಡಲಾಗಿದೆ. ಈಗ ಆ ರೀತಿ ಸರ್ಕಾರ ಮಾಡಬಾರದು. ಕಡು ಬಡವರು ಹೆಚ್ಚಿನ ಸಂಖ್ಯೆಯಲ್ಲಿರುವ ರಾಯಚೂರು ಜಿಲ್ಲೆಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ಹೇಳಿದರು.
ಏಮ್ಸ್ ಬೇಡಿಕೆಗೆ ಸಂಬಂಧಿಸಿ ಕರ್ನಾಟಕ ಮುಖ್ಯಮಂತ್ರಿ ಅವರಿಗೆ ಒತ್ತಾಯಿಸುವ ಕೆಲಸ ಮಾಡಲಾಗುವುದು ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.