ಸೋಮವಾರ, ಸೆಪ್ಟೆಂಬರ್ 16, 2019
29 °C

ವಿದ್ಯಾರ್ಥಿನಿ ಕೊಲೆ ಪ್ರಕರಣ: ಮತ್ತೆ ಆರೋಪಿ ನ್ಯಾಯಾಂಗ ವಶಕ್ಕೆ

Published:
Updated:
Prajavani

ರಾಯಚೂರು: ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಶಂಕಾಸ್ಪದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿ ಸುದರ್ಶನ್‌ ಯಾದವನನ್ನು ವಶಕ್ಕೆ ಪಡೆದಿದ್ದ ಸಿಐಡಿ ತಂಡವು ವಿಚಾರಣೆಯನ್ನು ಅಂತ್ಯಗೊಳಿಸಿ ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಿತು.

ಈ ಬಗ್ಗೆ ವಿಚಾರಣೆ ನಡೆಸಿದ ಜೆಎಂಎಫ್‌ಸಿ ಮೂರನೇ ನ್ಯಾಯಾಲಯದ ನ್ಯಾಯಾಧೀಶ ಅನಿವಾಶ ಗಾಳಿ ಅವರು, ಆರೋಪಿಯನ್ನು ಮೇ 14 ರವರೆಗೂ ಸಿಐಡಿಯಿಂದ ಮರಳಿ ನ್ಯಾಯಾಂಗ ವಶಕ್ಕೆ ಒಪ್ಪಿಸಿ ಆದೇಶ ನೀಡಿದರು.

Post Comments (+)