ಶನಿವಾರ, ಡಿಸೆಂಬರ್ 3, 2022
26 °C

ಗಬ್ಬೂರು ದೇವಸ್ಥಾನ ಜೀರ್ಣೋದ್ಧಾರಕ್ಕೆ ನೆರವು: ಸುಧಾಮೂರ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಐತಿಹಾಸಿಕ ಗಬ್ಬೂರು ಗ್ರಾಮದ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನಕ್ಕೆ ಇನ್ಫೋಸಿಸ್‌ ಫೌಂಡೇಷನ್‌ ಮುಖ್ಯಸ್ಥೆ ಸುಧಾಮೂರ್ತಿ ಅವರು ಬುಧವಾರ ಭೇಟಿನೀಡಿ, ದರ್ಶನ ಪಡೆದರು.

’ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನವನ್ನು ಜೀರ್ಣೋದ್ಧಾರವನ್ನು ಪ್ರಾಚ್ಯವಸ್ತು ಇಲಾಖೆಯ ನಿಯಮಗಳನ್ವಯ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

ಜನಸಾಮಾನ್ಯರ ರೀತಿಯಲ್ಲಿಯೇ ದೇವಸ್ಥಾನಕ್ಕೆ ಆಗಮಿಸಿ, ಕುಳಿತು ಪ್ರಾರ್ಥನೆ ಸಲ್ಲಿಸಿದರು.

‘ಈ ದೇವಸ್ಥಾನ ಪುರಾತತ್ವ ಇಲಾಖೆಯ ಅಧೀನದಲ್ಲಿದೆ. ದೇವಸ್ಥಾನ ಜೀರ್ಣೋದ್ಧಾರದ ಸಾಧ್ಯ, ಸಾಧ್ಯತೆ ಪರಿಶೀಲಿಸಲಾಗುವುದು. ಪುರಾತತ್ವ ಇಲಾಖೆಯ ಮಾರ್ಗದರ್ಶನ ಮೇರೆಗೆ ಯಾವ ರೀತಿಯಲ್ಲಿ ಜೀರ್ಣೋದ್ಧಾರ ಮಾಡಬಹುದು ಎನ್ನುವುದರ ಬಗ್ಗೆ ಮಾಹಿತಿ ಪಡೆಯಲಾಗುವುದು. ಈ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ತಮ್ಮದೇಯಾದ ನೆರವು ನೀಡಲಾಗುವುದು‘ ಎಂದು ಹೇಳಿದರು.

ದೇವಸ್ಥಾನದ ಕುರಿತು ಸ್ಥಳೀಯರೊಂದಿಗೆ ಚರ್ಚಿಸಿ ಅರ್ಧಗಂಟೆಯ ಬಳಿಕ ತೆರಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು