ಶನಿವಾರ, 21 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಕ್ಕಳಿಗೆ ವಿಜ್ಞಾನದ ಲಾಭ ತಿಳಿಸಲು ಸಲಹೆ

Published : 18 ಡಿಸೆಂಬರ್ 2018, 14:14 IST
ಫಾಲೋ ಮಾಡಿ
Comments

ರಾಯಚೂರು: ಮಕ್ಕಳ ಹಬ್ಬದಲ್ಲಿ ಮಕ್ಕಳು ಖುಷಿಯಿಂದ ವಿಜ್ಞಾನ ಹಿನ್ನೆಲೆ ತಿಳಿಯುವಂತೆ ಮಾಡಬೇಕು. ಮಕ್ಕಳಿಗೆ ಪ್ರತಿದಿನ ವಿಜ್ಞಾನದ ಅವಿಷ್ಕಾರದಿಂದ ಆಗುವ ಲಾಭಗಳ ಬಗ್ಗೆ ಮನವರಿಕೆ ಮಾಡಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ಕೆ. ನಂದನೂರು ಸಲಹೆ ನೀಡಿದರು.

ನಗರದ ಕನ್ನಡ ಭವನ ಸಭಾಂಗಣದಲ್ಲಿ ಬಾಲಭವನ ಸೊಸೈಟಿ ಬೆಂಗಳೂರು, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಭಾರತ ಜ್ಞಾನ ವಿಜ್ಞಾನ ಸಮಿತಿಯಿಂದ ಮಂಗಳವಾರ ಆಯೋಜಿಸದ್ದ ಜಿಲ್ಲಾಮಟ್ಟದ ಮಕ್ಕಳ ವಿಜ್ಞಾನ ಹಬ್ಬದ ಸಂಪನ್ಮೂಲ ವ್ಯಕ್ತಿಗಳ ತರಬೇತಿ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.

‘ಪ್ರತಿದಿನ ವಿಜ್ಞಾನವು ಜೀವನಕ್ಕೆ ಹೇಗೆ ಪೂರಕವಾಗಿದೆ. ವಿಜ್ಞಾನದ ಬಗ್ಗೆ ಮಕ್ಕಳಲ್ಲಿ ಆಸಕ್ತಿ ಹುಟ್ಟಿಸಬೇಕು. ವಿಜ್ಞಾನಿಗಳು ಎಲ್ಲಿಂದಲೋ ಬರುವುದಿಲ್ಲ. ನಾವು ವಿಜ್ಞಾನಿಗಳು ಏಕೆ ಆಗಬಾರದೆಂದು ಅವರಿಗೆ ಮನವರಿಕೆ ಮಾಡಿಕೊಡಿ. ಎಲ್ಲಿಯವರೆಗೆ ನಮ್ಮನ್ನು ನಾವು ಪ್ರಶ್ನೆ ಮಾಡಿಕೊಳ್ಳುವುದಿಲ್ಲವೋ ಬೆಳೆಯಲು ಸಾಧ್ಯವಾಗುವುದಿಲ್ಲ’ ಎಂದರು

ಮಕ್ಕಳಲ್ಲಿ ಪ್ರಶ್ನೆ ಕೇಳುವ ಪ್ರವೃತ್ತಿಯನ್ನು ಬೆಳೆಸುವ ಮೂಲಕ ಹಬ್ಬಗಳನ್ನು ಯಶಸ್ವಿಗೊಳಿಸಬೇಕು. ಪ್ರತಿ ತಾಲ್ಲೂಕಿನಲ್ಲಿ ಒಂದು ಮಕ್ಕಳ ವಿಜ್ಞಾನ ಹಬ್ಬ ಮಾಡಲಾಗುತ್ತದೆ. ಇದರಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ, ಬಿಜಿವಿಎಸ್ ಹಾಗೂ ಶಿಕ್ಷಣ ಇಲಾಖೆ ಸೇರಿ ಆಯೋಜಿಸಲಿವೆ ಎಂದು ತಿಳಿಸಿದರು

ಬಿಜಿವಿಎಸ್ ರಾಜ್ಯ ಸಮಿತಿಯಿಂದ ತರಬೇತುದಾರ ಈಶ್ವರಯ್ಯ ಹಿರೇಮಠ, ಬಳ್ಳಾರಿ ಶ್ಯಾಮ ಲಾಂಡೆ, ಬಿಜಿವಿಎಸ್ ರಾಜ್ಯ ಸಮಿತಿ ಸದಸ್ಯ ಸಂಗಮೇಶ ಹಿರೇಮಠ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT