ಶೌಚಾಲಯ ನಿರ್ಮಿಸಿ ಗ್ರಾಮ ಸ್ವರಾಜ್ಯದ ಕನಸು ನನಸಾಗಿಸಿ

7
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಆರ್.ನಾಗರಾಜ ಹೇಳಿಕೆ

ಶೌಚಾಲಯ ನಿರ್ಮಿಸಿ ಗ್ರಾಮ ಸ್ವರಾಜ್ಯದ ಕನಸು ನನಸಾಗಿಸಿ

Published:
Updated:
Deccan Herald

ರಾಯಚೂರು: ಗ್ರಾಮೀಣ ಭಾಗದಲ್ಲಿ ಮನೆಗೊಂದು ಶೌಚಾಲಯ ನಿರ್ಮಿಸುವ ಮೂಲಕ ಗ್ರಾಮ ಸ್ವರಾಜ್ಯದ ಕನಸನ್ನು 2019ರಲ್ಲಿ ಗಾಂಧಿ ಜಯಂತಿಗೆ ಕೊಡುಗೆ ನೀಡುವ ಮೂಲಕ ಅರ್ಥಪೂರ್ಣವಾಗಿ ಆಚರಣೆ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಆರ್.ನಾಗರಾಜ ಹೇಳಿದರು.

ತಾಲ್ಲೂಕಿನ ಯರಗೇರಾದ ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಭಾರತ ಸರಕಾರದ ಕ್ಷೇತ್ರ ಜನಸಂಪರ್ಕ ಕಾರ್ಯಾಲಯ, ತಾಲ್ಲೂಕು ಪಂಚಾಯಿತಿ, ಶಿಶು ಅಭಿವೃದ್ಧಿ ಯೋಜನೆ ಹಾಗೂ ಇತರೆ ಸಂಸ್ಥೆಗಳಿಂದ ಆಯೋಜಿಸಿದ್ದ ಸ್ವಚ್ಛ ಭಾರತ ಅಭಿಯಾನ ಹಾಗೂ ಶೌಚಾಲಯ ಬಳಕೆ ಕುರಿತ ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸ್ವಚ್ಛ ಭಾರತ ಅಭಿಯಾನ ಜಿಲ್ಲಾ ಸಮಾಲೋಚಕಿ ತಾರಕೇಶ್ವರಿ ಮಾತನಾಡಿ, ಶೌಚಾಲಯ ನಿರ್ಮಿಸಿಕೊಳ್ಳುವವರಿಗೆ 24ಗಂಟೆಯಲ್ಲಿ ಸಹಾಯಧನವನ್ನು ಫಲಾನುಭವಿಯ ಖಾತೆಗೆ ಜಮಾ ಮಾಡಲಾಗುತ್ತಿದ್ದು, ಜಾಗೃತಿ ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀರನಗೌಡ ಮಾತನಾಡಿ, ಮಹಿಳೆಯರ ಸುರಕ್ಷತೆ ಹಾಗೂ ಗೌರವಕ್ಕಾಗಿ ಸರ್ಕಾರ ನೀಡುತ್ತಿರುವ ಪ್ರೋತ್ಸಾಹ ಧನದ ಲಾಭ ಪಡೆದು ಶೌಚಾಲಯ ನಿರ್ಮಿಸಿಕೊಳ್ಳುವ ಮೂಲಕ ಕುಟುಂಬದ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.

ವಿಜಯಪುರ ಕ್ಷೇತ್ರ ಜನಸಂಪರ್ಕ ಕಾರ್ಯಾಲಯದ ಸಹಾಯಕ ಮುರಳೀಧರ ಕಾರಭಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಗ್ರಾಮ ಪಂಚಾಯಿತಿ ಅಧ್ಯೆಕ್ಷೆ ಲಕ್ಷ್ಮೀಬಾಯಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯೆಕ್ಷೆ ಶುಶಿಲಮ್ಮ, ಅಭಿವೃದ್ಧಿ ಅಧಿಕಾರಿ ಅಣ್ಣಾರಾವ್, ಮೊಹಮ್ಮದ ಅಜೀಜ, ಹನಮಂತ, ಮೈನೂದ್ದೀನ್, ಮೇಲ್ವಿಚಾರಕಿ ಗುರುಲಿಂಗಮ್ಮ, ಸ್ತ್ರೀಶಕ್ತಿ ಸಂಘದ ಅಧ್ಯೆಕ್ಷೆ ಈರಮ್ಮ, ವಿದ್ಯಾಸಾಗರ, ಅಮರೇಶ, ಮುಖ್ಯ ಶಿಕ್ಷಕ ಮಂಜುನಾಥ ಇದ್ದರು.

ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ಆಯೋಜಿಸಲಾಗಿತ್ತು. ಸ್ವಚ್ಛ ಭಾರತ ಅಭಿಯಾನದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !