ಇಂಧನ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಬಂದ್‌ ನಾಳೆ: ಸಂಸದ ಬಿ.ವಿ.ನಾಯಕ

7

ಇಂಧನ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಬಂದ್‌ ನಾಳೆ: ಸಂಸದ ಬಿ.ವಿ.ನಾಯಕ

Published:
Updated:

ರಾಯಚೂರು: ಇಂಧನ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಸೆಪ್ಟೆಂಬರ್ 10 ರಂದು ನಡೆಯಲಿರುವ ಭಾರತ ಬಂದ್‌ ಬೆಂಬಲಿಸಿ ಜಿಲ್ಲೆಯಲ್ಲಿ ಬಂದ್‌ ನಡೆಸಲಾಗುತ್ತದೆ ಎಂದು ಸಂಸದ ಬಿ.ವಿ.ನಾಯಕ ಹೇಳಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂಧನ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದರೂ, ಕೇಂದ್ರ ಸರ್ಕಾರ ಬೆಲೆ ಇಳಿಕೆಗೆ ಮುಂದಾಗದೇ ಜನಸಾಮಾನ್ಯರ ಮೇಲೆ ಹೊರೆ ಹಾಕಿದೆ. ಚುನಾವಣೆ ಸಂದರ್ಭದಲ್ಲಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ ಎಂದು ದೂರಿದರು.

ಬೆಲೆ ಏರಿಕೆ ಹಾಗೂ ಹಣದುಬ್ಬರ ನಿಯಂತ್ರಣ ಮಾಡುವುದಾಗಿ ಹೇಳಿದ ಭರವಸೆಯನ್ನು ಸರ್ಕಾರ ಮರೆತುಬಿಟ್ಟಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಬೆಲೆ ಏರಿಕೆ ವಿರುದ್ಧ ಹೋರಾಟ ನಡೆಸುತ್ತಿದ್ದ ಬಿಜೆಪಿ ಎಲ್ಲ ಬೆಲೆಗಳು ಗಗನಕ್ಕೇರುತ್ತಿದ್ದರೂ ಯಾವುದೇ ಕ್ರಮ ಜರುಗಿಸುತ್ತಿಲ್ಲ ಎಂದು ಆರೋಪಿಸಿದರು.

ಬೆಳಗಾವಿ ಜಿಲ್ಲೆಯ ಕಾಂಗ್ರೆಸ್‌ನಲ್ಲಿ ಉಂಟಾಗಿದ್ದ ಗೊಂದಲ ನಿವಾರಿಸಲಾಗಿದೆ. ಕಾಂಗ್ರೆಸ್‌ನ ಯಾವ ಶಾಸಕರೂ ಬಿಜೆಪಿಗೆ ಹೋಗಲ್ಲ. ಜಿಲ್ಲೆಯಲ್ಲಿಯೂ ಯಾವುದೇ ಬಣಗಳಿಲ್ಲ. ಎರಡೆರಡು ಬಿಫಾರಂ ಸಂಬಂಧಿಸಿದಂತೆ ಕೆಪಿಸಿಸಿ ಕ್ರಮ ಜರುಗಿಸಲಿದೆ. ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ ಎಂದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ರಾಮಣ್ಣ ಇರಬಗೇರಾ, ಶಾಸಕ ಬಸನಗೌಡ ದದ್ದಲ, ಅಮರೇಗೌಡ ಹಂಚಿನಾಳ, ಕೆ.ಶಾಂತಪ್ಪ, ಬಸವರಾಜರೆಡ್ಡಿ, ಜಯವಂತರಾವ ಪತಂಗೆ, ತಾಯಣ್ಣ ನಾಯಕ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !