ಗುರುವಾರ, 13 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಶಾಸಕ ಬಸನಗೌಡ

Published 26 ಮೇ 2024, 14:28 IST
Last Updated 26 ಮೇ 2024, 14:28 IST
ಅಕ್ಷರ ಗಾತ್ರ

ತುರ್ವಿಹಾಳ: ‘ವಿಧಾನ ಪರಿಷತ್ತಿನ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ಜೂನ್‌ 3ರಂದು ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಡಾ.ಚಂದ್ರಶೇಖರ ಪಾಟೀಲ ಅವರನ್ನು ಬೆಂಬಲಿಸಬೇಕು’ ಎಂದು ಶಾಸಕ ಆರ್.ಬಸನಗೌಡ ತುರ್ವಿಹಾಳ ಮನವಿ ಮಾಡಿದರು.

ಪಟ್ಟಣದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು,‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅತಿಥಿ ಶಿಕ್ಷಕರ ಹಾಗೂ ಉಪನ್ಯಾಸಕರ ವೇತನ ಹೆಚ್ಚಳ ಮಾಡಿದೆ. ಮುಂದಿನ ದಿನಗಳಲ್ಲಿ ಸರ್ಕಾರಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ನಿರುದ್ಯೋಗ ಪದವೀಧರರ ಸಮಸ್ಯೆಗಳನ್ನು ಪರಿಹರಿಸಲಾಗುವುದು’ ಎಂದು ಭರವಸೆ ನೀಡಿದರು.

ಕಲ್ಯಾಣ ಕರ್ನಾಟಕ ಭಾಗದ ಖಾಸಗಿ ಶಾಲೆ ಹಾಗೂ ಶಿಕ್ಷಕರ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ರೂಪಿಸಲಾಗುವುದು ಎಂದರು.

ಮುಖಂಡರಾದ ಶರಣಬಸವ ರಡ್ಡೆರ್, ಶರಣಪ್ಪ ಹೊಸಗೌಡ್ರು, ಬಾಪುಗೌಡ ದೇವರಮನಿ, ಖಾಸಗಿ ಶಾಲೆ ಶಿಕ್ಷಕರಾದ ವಿರುಪಾಕ್ಷಪ್ಪ ಗಚ್ಚಿನಮನಿ, ಅಯ್ಯಣ್ಣ ಬಡಿಗೇರ, ಅಯ್ಯಣ್ಣ ಸಿಂಧನೂರು, ಪದವೀಧರ ಮತದಾರರಾದ ರಮೇಶ ದಲಬಂಜನ್, ಕಳಕಪ್ಪ ಗಡೇದ, ರಮೇಶ ಸಜ್ಜನ, ಸೋಮಣ್ಣ ಮಾಟೂರು, ಸಂಪಣ್ಣ ಮೇಗೂರು ಹಾಗೂ ಶಂಕ್ರಗೌಡ ದೇವರಮನಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT