ರಾಯಚೂರು: 2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಖರೀದಿಗೆ ಸಂಬಂಧಿಸಿದಂತೆ ತಕ್ಷಣದಿಂದಲೇ ಖರೀದಿ ಪ್ರಕ್ರಿಯೆ ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ.

ಕೇಂದ್ರ ಸರ್ಕಾರದ ಬೆಂಬಲ ಬೆಲೆ ₹7,550ರ ಜೊತೆಗೆ ರಾಜ್ಯ ಸರ್ಕಾರದ ಪ್ರೋತಾಹ ಧನ ಕ್ವಿಂಟಲ್ಗೆ ₹450 ಸೇರಿ ಪ್ರತಿ ಕ್ವಿಂಟಲ್ ತೊಗರಿಯನ್ನು ₹ 8 ಸಾವಿರಕ್ಕೆ ಖರೀದಿಸಲು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದ್ದರು.

ತೊಗರಿ ಬೆಳೆಯುವ ಜಿಲ್ಲೆಗಳಾದ ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ವಿಜಯಪುರ, ಕೊಪ್ಪಳ, ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಚಿತ್ರದುರ್ಗ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ವ್ಯಾಪ್ತಿಯ ಗ್ರಾಮೀಣ ಭಾಗದಲ್ಲಿ ಅಂದಾಜು 330 ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲು ಕ್ರಮ ವಹಿಸಲಾಗಿದೆ.

ರೈತರು ತಮ್ಮ ಹತ್ತಿರದ ಪಿಎಸಿಎಸ್, ಎಫ್ಪಿಒ, ಟಿಎಪಿಸಿಎಂಎಸ್ಗಳಿಗೆ ಭೇಟಿ ನೀಡಿ ನೋಂದಣಿ ಮಾಡಿಕೊಂಡು ಬೆಂಬಲ ಬೆಲೆ ಯೋಜನೆಯ ಹಾಗೂ ರಾಜ್ಯ ಸರ್ಕಾರದ ಪ್ರೋತ್ಸಾಹ ಧನದ ಸದುಪಯೋಗ ಪಡೆಯಬೇಕು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.