ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾನ್ವಿ: ಶಂಕಿತ ಝಿಕಾ ವೈರಸ್ ಜ್ವರ ಪತ್ತೆ

ಕೋಳಿ ಕ್ಯಾಂಪ್‌ನಲ್ಲಿ ಆರೋಗ್ಯ ಇಲಾಖೆಯಿಂದ ಜಾಗೃತಿ
Last Updated 12 ಡಿಸೆಂಬರ್ 2022, 5:55 IST
ಅಕ್ಷರ ಗಾತ್ರ

ಮಾನ್ವಿ: ತಾಲ್ಲೂಕಿನ ನೀರಮಾನ್ವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಳಿ ಕ್ಯಾಂಪ್‌ನಲ್ಲಿ ಶಂಕಿತ ಝಿಕಾ ವೈರಸ್ ಜ್ವರ ಪತ್ತೆಯಾಗಿದೆ.

ಕೋಳಿ ಕ್ಯಾಂಪ್ ನಿವಾಸಿ ನಾಗರಾಜ ಎಂಬುವರ ಪುತ್ರಿ ಪವಿತ್ರಾ(5) ಶಂಕಿತ ಝಿಕಾ ವೈರಸ್ ಜ್ವರಪೀಡಿತಳಾಗಿದ್ದು ಚಿಕಿತ್ಸೆ ನಂತರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.

ಕೆಲ ದಿನಗಳ ಹಿಂದೆ ಅನಾರೋಗ್ಯ ಪೀಡಿತ ಮಗು ಪವಿತ್ರಾಳನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿದ್ದಾಗ ಶಂಕಿತ ಝಿಕಾ ವೈರಸ್ ಜ್ವರ ದೃಢಪಟ್ಟಿತ್ತು ಎಂದು ತಿಳಿದುಬಂದಿದೆ. ಭಾನುವಾರ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಚಂದ್ರಶೇಖರಯ್ಯ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿ ಕೋಳಿ ಕ್ಯಾಂಪ್‌ಗೆ ಭೇಟಿ ನೀಡಿ, ಸೊಳ್ಳೆಗಳ ನಿಯಂತ್ರಣ ಹಾಗೂ ಸ್ವಚ್ಛತೆ ಕುರಿತು ಜನಜಾಗೃತಿ ಮೂಡಿಸಿದರು.

ಡಾ.ಚಂದ್ರಶೇಖರಯ್ಯ ಪ್ರತಿಕ್ರಿಯಿಸಿ, ‘ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದ ಐದು ವರ್ಷದ ಮಗು ಪವಿತ್ರಾ ಡೆಂಗಿ ಮಾದರಿಯ ಶಂಕಿತ ಝಿಕಾ ವೈರಸ್ ಜ್ವರದಿಂದ ಬಳಲುತ್ತಿರುವ ಬಗ್ಗೆ ತಿಳಿದು ಬಂದಿತ್ತು. ಚಿಕಿತ್ಸೆ ನಂತರ ಈಗ ಗುಣಮುಖಳಾಗಿದ್ದಾಳೆ. ಕೋಳಿ ಕ್ಯಾಂಪ್‌ನಲ್ಲಿ ಸೊಳ್ಳೆಗಳಿಂದ ಸಾಂಕ್ರಾಮಿಕ ರೋಗಗಳು ಹರಡುವ ಬಗ್ಗೆ ಜನಜಾಗೃತಿ ಮೂಡಿಸಲಾಗಿದೆ. ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯದ ಸಮೀಕ್ಷೆ ನಡೆಸುತ್ತಿದ್ದಾರೆ’ ಎಂದು ತಿಳಿಸಿದರು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ, ಆರೋಗ್ಯ ಇಲಾಖೆಯ ಅಧಿಕಾರಿಗಳಾದ ಹುಸೇನಮ್ಮ, ಶ್ರೀನಿವಾಸ, ಚಂದ್ರಶೇಖರ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT