ಭಾನುವಾರ, ಜನವರಿ 19, 2020
23 °C

ಅತ್ಯಾಚಾರಿಗಳ ಎನ್‌ಕೌಂಟರ್‌: ರಾಯಚೂರಿನಲ್ಲಿ ಸಿಹಿ ಹಂಚಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಹೈದರಾಬಾದ್‌ನಲ್ಲಿ ಪೊಲೀಸರು ನಾಲ್ವರು ಅತ್ಯಾಚಾರಿಗಳನ್ನು ಎನ್‌ಕೌಂಟರ್‌ ಮಾಡಿರುವುದನ್ನು ಪ್ರಂಶಸಿಸಿ, ಕಲಾ ಸಂಕುಲ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮಾರುತಿ ಬಡಿಗೇರ್‌ ಅವರು ನಗರದ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಎಲ್ಲರಿಗೂ ಶುಕ್ರವಾರ ಸಿಹಿ ಹಂಚಿದರು.

ಈ ನಿಮಿತ್ತ ಕಾಲೇಜಿನಲ್ಲಿ ನಡೆದ ಸರಳ ಸಮಾರಂಭದಲ್ಲಿ ಹೈದರಾಬಾದ್‌ ಪೊಲೀಸರು ಕೈಗೊಂಡ ನಿರ್ಧಾರವನ್ನು ಶ್ಲಾಘಿಸಿ ಮಾರುತಿ ಬಡಿಗೇರ್‌ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲೆ, ಶಿಕ್ಷಕರು ಇದ್ದರು.

ಪ್ರತಿಕ್ರಿಯಿಸಿ (+)