ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾಪಲದಿನ್ನಿ: 3ನೇ ಅಲೆ ತಡೆಗೆ ಸಿದ್ಧತೆ

Last Updated 7 ಆಗಸ್ಟ್ 2021, 12:24 IST
ಅಕ್ಷರ ಗಾತ್ರ

ಯಾಪಲದಿನ್ನಿ (ಶಕ್ತಿನಗರ): ‘ಕೋವಿಡ್ ಮೂರನೇ ಅಲೆಯಿಂದ ಮಕ್ಕಳಿಗೆ ತೊಂದರೆ ಆಗದಂತೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದೆ’ ಎಂದು ತಹಶೀಲ್ದಾರ್ ಡಾ.ಹಂಪಣ್ಣ ಸಜ್ಜನ್ ತಿಳಿಸಿದರು.

ಯಾಪಲದಿನ್ನಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶುಕ್ರವಾರ ಭೇಟಿ ನೀಡಿ,‘ಮೂರನೇ ಅಲೆ ಹರಡುವಿಕೆಯನ್ನು ಗಮನದಲ್ಲಿರಿಸಿಕೊಂಡು ಲಸಿಕೆ ಕುರಿತು ಜನರಲ್ಲಿ ಅರಿವು ಮೂಡಿಸಬೇಕು. ಗ್ರಾಮ ಮಟ್ಟದ ಸಿಬ್ಬಂದಿಗೆ ಆದ್ಯತೆಯ ಮೇರೆಗೆ 2ನೇ ಡೋಸ್‌ ನೀಡಬೇಕು ಮತ್ತು 60 ವರ್ಷ ಮೇಲ್ಪಟ್ಟ ವೃದ್ಧರನ್ನು ಕರೆತಂದು ಲಸಿಕೆ ನೀಡಬೇಕು ಎಂದು ಸೂಚಿಸಲಾಗಿದೆ’ ಎಂದರು.

ಮಕ್ಕಳ ಆರೋಗ್ಯದ ಕಡೆ ಗಮನ ಕೊಡಬೇಕು. ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೋವಿಡ್‌ 2ನೇ ಡೋಸ್‌ ಲಸಿಕೆ ಹಾಕಿಸಿಕೊಳ್ಳುವಂತೆ ಜನರಿಗೆ ಅರಿವು ಮೂಡಿಸಬೇಕು ಎಂದು ಆರೋಗ್ಯ ಕೇಂದ್ರದ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ ಎಂದರು.

ಕಂದಾಯ ನಿರೀಕ್ಷಕ ರಾಮು ಯಾದವ, ಯಾಪಲದಿನ್ನಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಹಾಗೂ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT