ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಆಯುಷ್ಮಾನ್‌ ಭಾರತ್‌ ಯೋಜನೆ ಪ್ರಯೋಜನ ಪಡೆದುಕೊಳ್ಳಿ: ಬಾಲಪ್ಪ ನಾಯಕ

Published 2 ಜುಲೈ 2024, 14:19 IST
Last Updated 2 ಜುಲೈ 2024, 14:19 IST
ಅಕ್ಷರ ಗಾತ್ರ

ಕವಿತಾಳ: ‘ತುರ್ತು ಸಂದರ್ಭದಲ್ಲಿ ಉತ್ತಮ ಆರೋಗ್ಯ ಸೇವೆ ಪಡೆಯಲು ಆಯುಷ್ಮಾನ್ ಭಾರತ್ ಕಾರ್ಡ್ ಪಡೆಯುವುದು ಅಗತ್ಯʼ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ ಹೇಳಿದರು.

ಸಮೀಪದ ಬಾಗಲವಾಡ ಗ್ರಾಮದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಆಯುಷ್ಮಾನ್ ಭಾರತ್ ನೋಂದಣಿ ಹಾಗೂ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿ ‘ಆಯುಷ್ಮಾನ್ ಭಾರತ್ ಕಾರ್ಡ್ ಪಡೆದ ಬಿಪಿಎಲ್ ಕುಟುಂಬಕ್ಕೆ ₹5 ಲಕ್ಷದವರೆಗೆ ಉಚಿತ ಚಿಕಿತ್ಸೆ ಪಡೆಯಲು ಅವಕಾಶ ಕಲ್ಪಿಸಲಾಗಿದೆʼ ಎಂದು ಹೇಳಿದರು.

ಸಮುದಾಯ ಆರೋಗ್ಯ ಅಧಿಕಾರಿ ಮಹೇಶ, ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ಯಂಕಮ್ಮ, ಅಂಗನವಾಡಿ ಕಾರ್ಯಕರ್ತೆ ಅಂಬುತಾಯಿ, ಆಶಾ ಕಾರ್ಯಕರ್ತೆ ಚನ್ನಮ್ಮ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT