ಮಸ್ಕಿ: ‘ಆರೋಗ್ಯ ಉಚಿತ ತಪಾಸಣೆ ಶಿಬಿರದಲ್ಲಿ ಭಾಗವಹಿಸಿ ದೇಹದ ಎಲ್ಲ ಸಮಸ್ಯೆಗಳಿಗೆ ಸೂಕ್ತ ಸಲಹೆ ಪಡೆದುಕೊಳ್ಳಿ’ ಎಂದು ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷರೂ ಆದ ಹಿರಿಯ ವಕೀಲ ಮಸ್ಕಿ ನಾಗರಾಜ ಸಲಹೆ ನೀಡಿದರು.

ಪಟ್ಟಣದ ಭ್ರಮರಾಂಬ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಶನಿವಾರ ವೀರಭದ್ರಯ್ಯ ತಾತನವರ ಫೌಂಡೇಶನ್, ಸಪ್ತಗಿರಿ ಆಸ್ಪತ್ರೆ ಹಾಗೂ ವಿವಿಧ ಸಂಸ್ಥೆಗಳ ಆಶ್ರಯದಲ್ಲಿ ನಡೆದ ಆರೋಗ್ಯ ಉಚಿತ ತಪಾಸಣೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

‘ವೀರಭದ್ರಯ್ಯ ತಾತನವರ ಹೆಸರು ಈ ಭಾಗದಲ್ಲಿ ಚಿರಪರಿಚಿತ. ಅವರ ಮಕ್ಕಳು ಹಾಗೂ ಕುಟುಂಬದ ಸದಸ್ಯರು ವೀರಭದ್ರಯ್ಯ ತಾತನವರ ಹೆಸರಿನಲ್ಲಿ ಫೌಂಡೇಶನ್ ಸ್ಥಾಪಿಸಿ ಶ್ರಾವಣಮಾಸದ ಈ ದಿನಗಳಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಂಡಿದ್ದು ಉತ್ತಮ ಕೆಲಸ’ ಎಂದರು.

ಗಚ್ಚಿನಮಠದ ವರರುದ್ರಮುನಿ ಸ್ವಾಮೀಜಿ, ಮುಖಂಡ ಮಹಾದೇವಪ್ಪಗೌಡ ಪೋಲಿಸ್‌ಪಾಟೀಲ, ಡಾ.ಶಿವಶರಣಪ್ಪ ಇತ್ಲಿ, ಡಾ. ಬಿ.ಎಚ್.ದಿವಟರ್, ಲಯನ್ಸ್ ಕ್ಲಬ್ ಅಧ್ಯಕ್ಷ ಆದಯ್ಯಸ್ವಾಮಿ ಕ್ಯಾತನಟ್ಟಿ, ವೀರಭದ್ರಯ್ಯ ತಾತನವರ ಫೌಂಡೇಶನ್ ಅಧ್ಯಕ್ಷ ಸಿದ್ದಲಿಂಗಯ್ಯ ಸೊಪ್ಪಿಮಠ, ಕಾರ್ಯದರ್ಶಿ ಎಂ.ಅಮರೇಶ, ಡಾ.ಮೌನೇಶ, ಸಪ್ತಗಿರಿ ಆಸ್ಪತ್ರೆ ಬೆಂಗಳೂರಿನ ವೈದ್ಯರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.