ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪೌಷ್ಟಿಕತೆ ನಿರ್ಮೂಲನೆಗೆ ಕಾಳಜಿ ವಹಿಸಿ: ಶಶಿಧರ ಕುರೇರ

ಆರೋಗ್ಯ ಇಲಾಖೆಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ
Last Updated 24 ನವೆಂಬರ್ 2022, 12:50 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಯಲ್ಲಿ ಮಕ್ಕಳ ಹಾಗೂ ಗರ್ಭಿಣಿಯರಲ್ಲಿ ಅಪೌಷ್ಟಿಕತೆ ನಿರ್ಮೂಲನೆಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯೊಂದಿಗೆ ಆರೋಗ್ಯ ಇಲಾಖೆಯು ಸಹಕಾರದಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಂಬಂಧಪಟ್ಟ ವಿವಿಧ ಕಾರ್ಯಕ್ರಮಗಳ ಕುರಿತು ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಆರೋಗ್ಯದ ವಿಚಾರವಾಗಿ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಹೆಚ್ಚಿನ ಕಾಳಜಿ ವಹಿಸಿ ಕಾರ್ಯ ನಿರ್ವಹಿಸಬೇಕು. ಆರೋಗ್ಯ ಇಲಾಖೆಯಿಂದ ನಡೆಸಲಾಗುವ ವಿವಿಧ ಜಾಗೃತಿ ಕಾರ್ಯಕ್ರಮಗಳು ಹಾಗೂ ಸರ್ಕಾರ ಯೋಜನೆಗಳನ್ನು ಅನುಷ್ಠಾನಗೊಳಿಸಿ ಸರ್ಕಾರದ ಸೌಲಭ್ಯಗಳು ಜನರಿಗೆ ತಲುಪಿಸುವಲ್ಲಿ ಹೆಚ್ಚಿನ ಪ್ರಗತಿ ಸಾಧಿಸುವಂತೆ ತಿಳಿಸಿದರು.

ಗ್ರಾಮೀಣ ಮಟ್ಟದಿಂದ ಜಿಲ್ಲಾಮಟ್ಟದವರೆಗಿನ ಎಲ್ಲಾ ಆರೋಗ್ಯ ಕೇಂದ್ರಗಳು ಹಾಗೂ ಆಸ್ಪತ್ರೆಗಳಲ್ಲಿ ಸರಿಯಾದ ಸಮಯದಲ್ಲಿ ಹಾಜರಿದ್ದು, ರೋಗಿಯ ಆರೈಕೆ ಜೊತೆಗೆ ಆಡಳಿತ ವಿಚಾರದಲ್ಲಿಯೂ ಹೆಚ್ಚಿನ ಒತ್ತು ನೀಡುವಂತೆ ಸೂಚನೆ ನಿಡಿದರು.

ಜಿಲ್ಲೆಯಲ್ಲಿರುವ ಎಲ್ಲಾ ಉಪ ಕೇಂದ್ರಗಳು,ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ತಾಲ್ಲೂಕು ಮಟ್ಟದ ಆಸ್ಪತ್ರೆಗಳು ಕಾಯಕಲ್ಪ ಯೋಜನೆ ಅಡಿಯಲ್ಲಿ ಸೂಚಿಸಿದಂತಹ ಮಾನದಂಡಗಳ ಪ್ರಕಾರ ಅರ್ಹತೆ ಪಡೆದುಕೊಳ್ಳಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸುರೇಂದ್ರಬಾಬು, ರಿಮ್ಸ್ ಆಸ್ಪತ್ರೆಯ ನಿರ್ದೇಶಕ ಡಾ.ಬಸವರಾಜ ಪಿರಾಪುರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಎಸ್.ಚೇತನ್, ಆರ್‌ಸಿಎಚ್ ಅಧಿಕಾರಿ ನಂದಿತಾ ಸೇರಿದಂತೆ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು ತಾಲ್ಲೂಕು ಆರೋಗ್ಯ ಅಧಿಕಾರಿಗಳು ಮತ್ತು ವೈದ್ಯಾಧಿಕಾರಿಗಳು, ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT