ರಾಯಚೂರು: ಭಗೀರಥ ಉಪ್ಪಾರ ಸಮಾಜ ಸಂಘ ಜಿಲ್ಲಾ ಘಟಕದ ವತಿಯಿಂದ ಅಕ್ಟೋಬರ್ 29ರಂದು ಬೆಳಿಗ್ಗೆ 10ಕ್ಕೆ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಮಾಜದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಆದಿರಾಜ ಆದೋನಿ ತಿಳಿಸಿದರು.
ರಾಯಚೂರು ಜಿಲ್ಲೆಯ ಭಗೀರಥ ಸಮಾಜದ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ದ್ವಿತೀಯ ತರಗತಿಯಲ್ಲಿ ಶೇ 80ಕ್ಕೂ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.
ರಾಜ್ಯದ 224 ಶಾಸಕರಲ್ಲಿ ಸಮಾಜದ ಏಕೈಕ ಶಾಸಕರಾಗಿರುವ ಸಿ.ಪುಟ್ಟರಂಗಶೆಟ್ಟಿ, ಸಚಿವ ಎನ್.ಎಸ್. ಬೋಸರಾಜು ಹಾಗೂ ಜಿಲ್ಲೆಯ ಶಾಸಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಈ ವೇಳೆ ಸಂಘದ ಕಾರ್ಯಾಧ್ಯಕ್ಷ ಮಾಣಿಕಪ್ಪ ಚಂದ್ರಬಂಡಾ, ಎಂ.ರಾಮಾಂಜನೇಯ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.