ಮಸ್ಕಿ: ‘ಪಟ್ಟಣದ ಕ್ರೀಡಾಪಟುಗಳ ಬಹುದಿನದ ಕನಸಾಗಿದ್ದ ತಾಲ್ಲೂಕು ಕ್ರೀಡಾಂಗಣ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಬಜೆಟ್ನಲ್ಲಿ ಅನುದಾನ ಘೋಷಿಸಿದೆ’ ಎಂದು ಶಾಸಕ ಹಾಗೂ ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್.ಬಸನಗೌಡ ತುರ್ವಿಹಾಳ ತಿಳಿಸಿದ್ದಾರೆ.

ಪಟ್ಟಣದಲ್ಲಿ ಮಾತನಾಡಿದ ಅವರು,‘ತಾಲ್ಲೂಕಿನ ಅಭಿವೃದ್ಧಿಗೆ ಸರ್ಕಾರ ಹಲವು ಮಹತ್ವದ ಯೋಜನೆಗಳನ್ನು ಪ್ರಕಟಿಸಿದೆ. ಮಸ್ಕಿ ಪಟ್ಟಣದಲ್ಲಿ ತಾಲ್ಲೂಕುಮಟ್ಟದ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣಕ್ಕೆ ₹2 ಕೋಟಿ ಅನುದಾನ ಮೀಸಲಿಟ್ಟಿದೆ. ಕ್ರೀಡಾಂಗಣ ನಿರ್ಮಾಣವಾದರೆ, ಸ್ಥಳೀಯ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಸಿಕ್ಕಂತಾಗುತ್ತದೆ’ ಎಂದು ಹೇಳಿದರು.

‘ಪಟ್ಟಣದಲ್ಲಿ ಶ್ರಮಿಕ ವಸತಿ ಶಾಲೆ ಆರಂಭಿಸುವುದಾಗಿ ಸರ್ಕಾರ ಘೋಷಣೆ ಮಾಡಿದೆ. ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸೌಲಭ್ಯ ಒದಗಿಸುವ ಉದ್ದೇಶದಿಂದ ಈ ವಸತಿ ಶಾಲೆ ಸ್ಥಾಪಿಸಲಾಗುತ್ತಿದೆ. ಇದರಿಂದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮಕ್ಕಳಿಗೆ ಶಿಕ್ಷಣದಲ್ಲಿ ಉತ್ತಮ ಅವಕಾಶಗಳು ಲಭ್ಯವಾಗಲಿವೆ’ ಎಂದು ಹೇಳಿದರು.

‘ತಾಲ್ಲೂಕಿನ ಬಳಗಾನೂರು ಪಟ್ಟಣಕ್ಕೆ ಹೊಸ ಪದವಿ ಕಾಲೇಜು ಮಂಜೂರು ಮಾಡಲಾಗಿದೆ. ಇದರಿಂದ ಈ ಭಾಗದ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ದೂರದ ಪಟ್ಟಣಗಳಿಗೆ ತೆರಳುವುದು ತಪ್ಪಲಿದೆ’ ಎಂದರು.

‘ಪಾಮನಕೆಲ್ಲೂರು ಸೇರಿದಂತೆ ಇತರೆ ಹಳ್ಳಿಗಳಿಗೆ ನೀರುಣಿಸುವ ಕಾಲುವೆ ಕಾಮಗಾರಿಯನ್ನು ಮುಂದುವರಿಸಲಾಗಿದೆ. ಕೃಷಿಗೆ ಅಗತ್ಯ ನೀರು ಸಿಗುವಂತೆ ಸರ್ಕಾರ ಕ್ರಮ ಕೈಗೊಂಡಿದೆ’ ಎಂದು ಹೇಳಿದರು.

‘ಮಸ್ಕಿ ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆಗೇರಿಸುವ ಯೋಜನೆಯೂ ಜಾರಿಗೆ ಬರಲಿದೆ. ಟೆಂಡರ್ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದ್ದು, ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ’ ಎಂದು ಶಾಸಕ ತುರ್ವಿಹಾಳ ತಿಳಿಸಿದರು.

ತಾಲ್ಲೂಕು ಕಚೇರಿ ಘೋಷಣೆ

ಮರೀಚಿಕೆ ಬಜೆಟ್ನಲ್ಲಿ ಮಸ್ಕಿ ತಾಲ್ಲೂಕು ಕೇಂದ್ರಕ್ಕೆ ಪೂರ್ಣ ಪ್ರಮಾಣದ ತಾಲ್ಲೂಕು ಕಚೇರಿ ಮಂಜೂರಾಗಬಹುದು ಎಂಬ ನಿರೀಕ್ಷೆ ಸಾರ್ವಜನಿಕರಲ್ಲಿ ಮೂಡಿದ್ದರೂ ಈ ಬಾರಿ ಅದಕ್ಕೆ ಸಂಬಂಧಿಸಿದ ಯಾವುದೇ ಘೋಷಣೆ ಮಾಡದಿರುವುದು ನಿರಾಶೆಗೆ ಕಾರಣವಾಗಿದೆ.

ತಾಲ್ಲೂಕು ರಚನೆಯಾಗಿ ಹಲವು ವರ್ಷಗಳು ಕಳೆದರೂ ಬಹುತೇಕ ಸರ್ಕಾರಿ ಕಚೇರಿಗಳೂ ಇನ್ನೂ ತಾತ್ಕಾಲಿಕ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಸಂಪೂರ್ಣ ಸೌಲಭ್ಯಗಳೊಂದಿಗೆ ತಾಲ್ಲೂಕು ಮಟ್ಟದ ಕಚೇರಿ ಸಂಕೀರ್ಣ ನಿರ್ಮಾಣವಾಗಬೇಕು ಎಂಬುದು ಜನರ ಬಹುಕಾಲದ ಬೇಡಿಕೆಯಾಗಿದೆ. ತಾಲ್ಲೂಕುಮಟ್ಟದ ಎಲ್ಲಾ ಇಲಾಖೆಗಳ ಕಚೇರಿಗಳು ಒಂದೇ ಸಂಕೀರ್ಣದಲ್ಲಿ ಕಾರ್ಯನಿರ್ವಹಿಸುವಂತೆ ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.