ಭಾನುವಾರ, ಮೇ 16, 2021
28 °C
ವಿಡಿಯೊ ಸಂವಾದದಲ್ಲಿ ಪಿಡಿಒಗಳಿಗೆ ಸೂಚನೆ

ನೀರಿನ ಸಮಸ್ಯೆಯಾಗದಂತೆ ಎಚ್ಚರ ವಹಿಸಿ: ಶಾಸಕ ಬಸನಗೌಡ ದದ್ದಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಕ್ತಿನಗರ: ‘ಜನರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಎಚ್ಚರ ವಹಿಸಬೇಕು’ ಎಂದು ಶಾಸಕ ಬಸನಗೌಡ ದದ್ದಲ್ ಹೇಳಿದರು.

ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಟಾಸ್ಕ್‌ಪೋರ್ಸ್‌ ಸಮಿತಿ ಸಭೆಯಲ್ಲಿ ವಿಡಿಯೊ ಸಂವಾದದ ಮೂಲಕ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ಬೇಸಿಗೆ ಆರಂಭವಾಗಿದೆ. ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಹೇಳಿದರು.

‘ಕೊರೊನಾ ನಿಯಂತ್ರಣಕ್ಕೆ ಲಾಕ್‌ಡೌನ್‌ ಜಾರಿ ಮಾಡಲಾಗಿದೆ. ನೆರೆ ಜಿಲ್ಲೆಗಳಿಂದ ವಲಸೆ ಬರುವ ಜನರನ್ನು ತಡೆಯಲು ಕ್ರಮ ಕೈಗೊಳ್ಳಬೇಕು. ಪ್ರತಿಯೊಬ್ಬರೂ ಲಸಿಕೆ ಪಡೆಯಬೇಕು. ಅದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಜನರು ಭಯಪಡುವ ಅಗತ್ಯವಿಲ್ಲ. ಜಾಗೃತರಾಬೇಕು’ ಎಂದು ಶಾಸಕರು ಸೂಚನೆ ನೀಡಿದರು.

ದೇವಸೂಗೂರು, ಡಿ.ಯದ್ಲಾಪುರ, ಶಾಖವಾದಿ, ಸಗಮಕುಂಟ, ಕಾಡ್ಲೂರು, ಜೇಗರಕಲ್‌, ಮನ್ಸಲಾಪುರ, ಚಿಕ್ಕಸೂಗೂರು ಸೇರಿದಂತೆ ರಾಯಚೂರು ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಿಡಿಒಗಳು ಮತ್ತು ಟಾಸ್ಕ್‌ಪೋರ್ಸ್‌ ಸಮಿತಿ ಸದಸ್ಯರು ವಿಡಿಯೊ ಸಂವಾದದಲ್ಲಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು