ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರ ಜವಾಬ್ದಾರಿ ಮಹತ್ವದ್ದು: ವೀರಲಕ್ಷ್ಮೀ

ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ
Last Updated 5 ಸೆಪ್ಟೆಂಬರ್ 2019, 13:03 IST
ಅಕ್ಷರ ಗಾತ್ರ

ರಾಯಚೂರು: ಶಿಕ್ಷಕ ವೃತ್ತಿಯು ಅತಿಶ್ರೇಷ್ಠವಾಗಿದ್ದು, ವಿದ್ಯಾರ್ಥಿಗಳನ್ನು ನಾಡಿನ ಉತ್ತಮ ಪ್ರಜೆಗಳಾಗಿ ಮಾಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಹೇಳಿದರು.

ನಗರದ ಪಂಡಿತ್‌ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಗುರುವಾರ ಅಯೋಜಿಸಿದ್ದ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಆವರ 132ನೇ ಜನ್ಮದಿನೋತ್ಸವದ ನಿಮಿತ್ತ ಜಿಲ್ಲಾ ಶಿಕ್ಷಕರ ದಿನಾಚರಣೆ ಹಾಗೂ ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ರಾಯಚೂರು ವಿಶ್ವವಿದ್ಯಾಲಯದ ವಿಶೇಷ ಅಧಿಕಾರಿ ಮುಜಾಫರ್ ಆಸಾದಿ ಮಾತನಾಡಿ, ಶಿಕ್ಷಕರು ಎಂದರೆ ಹೊಸ ಪೀಳಿಗೆಯ ಬದುಕು ಬೆಳಗುವ ಜ್ಯೋತಿ ಸ್ವರೂಪಿಯಾಗಿದ್ದಾರೆ. ಸರ್ವೆಪಲ್ಲಿ ರಾಧಾಕೃಷ್ಣನ್ ಅವರು ಭಾರತದ ಪರಂಪರೆಯನ್ನು ಪಾಶ್ಚಿಮಾತ್ಯ ದೇಶಗಳಿಗೆ ಬೋಧಿಸಿದ ಮಹಾನ್ ಪಂಡಿತರಾಗಿದ್ದರು. ವಿದ್ಯಾರ್ಥಿಗಳನ್ನು ಜ್ಞಾನವೆಂಬ ಬೆಳಕಿನತ್ತ ಮುನ್ನಡೆಸುವ ಕಾರ್ಯದಲ್ಲಿ ಪ್ರಮುಖವಾಗಿ ಪ್ರಾಥಮಿಕ ಶಿಕ್ಷಕರು ಹೆಚ್ಚಿನ ಶ್ರಮ ವಹಿಸುತ್ತಿದ್ದಾರೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕಾಸಿಂ ನಾಯಕ ಮಾತನಾಡಿದರು.ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ಕೆ. ನಂದನೂರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ ಮಾಡಲಾಯಿತು. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಅತ್ಯುತ್ತಮ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದವರು: ದೇವದುರ್ಗ ತಾಲ್ಲೂಕಿನ ಗುಂಡೇರದೊಡ್ಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಸುರೇಶ ಕಟ್ಟಿಮನಿ, ಅರಕೇರಾ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರು ಮಲ್ಲಿಕಾರ್ಜುನ, ದೇವದುರ್ಗ ಕನ್ಯಾ ಸರ್ಕಾರಿ ಪ್ರೌಢಶಾಲೆಯ ದೈ.ಶಿ. ಮಮತಾ ಆದಿ, ಲಿಂಗಸಗೂರು ತಾಲ್ಲೂಕಿನ ಬೇಡರ ಕಾರಲಕುಂಟೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರು ಸೋಮಶೇಖರ, ದೇವರ ಭೂಪೂರದೊಡ್ಡಿ ಸರ್ಕಾರಿ ಕಿರಿಯ ಶಾಲೆಯ ಸಹ ಶಿಕ್ಷಕ ಹಣಮಂತಪ್ಪ ಬೋರಗಿ, ಬೆಂಡೋಣಿ ಸರ್ಕಾರಿ ಹಿರಿಯ ಶಾಲೆಯ ಸಹಶಿಕ್ಷಕ ಚಂದ್ರು ವೈ.ಎ., ಲಿಂಗಸುಗೂರಿನ ಆಂಗ್ಲ ಭಾಷೆ ಸರ್ಕಾರಿ ಉರ್ದು ಪ್ರೌಢ ಶಾಲೆಯ ಸಹಶಿಕ್ಷಕ ಮಾರ್ಟಿನ್ ಅಮಲರಾಜ್, ಮಾನ್ವಿ ತಾಲ್ಲೂಕಿನ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ವೆಂಕಟೇಶ, ಕೊರವಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಮೋಹನಕುಮಾರ ಡಿ., ಸಂಗಾಪೂರಿನ ಹಿಂದಿ, ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಲತಾ ತಾಸೀನ, ಸಿಂಧನೂರು ತಾಲ್ಲೂಕಿನ ದುಗ್ಗಮ್ಮನಗುಂಡ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಶಂಕರ ದೇವರು ಹಿರೇಮಠ, ಆರ್.ಎಚ್.ಕಾಲೋನಿ ನಂ.5ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯಗುರು (ಸ.ಶಿ) ರಾಜಕುಮಾರ, ವಳಬಳ್ಳಾರಿಯ ವಿಜ್ಞಾನ, ಸರ್ಕಾರಿ ಪ್ರೌಢಶಾಲೆಯ ಸ.ಶಿ. ಶಂಭುಲಿಂಗಯ್ಯ, ರಾಯಚೂರು ತಾಲ್ಲೂಕಿನ ದುಗನೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸ.ಶಿ. ಗಫೂರ ಮತ್ತು ಮರ್ಚಟಹಾಳದ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕ ಅಮರೇಶ.

ವಿಶೇಷ ಶಿಕ್ಷಕ ಪ್ರಶಸ್ತಿಗೆ ಸಿಂಧನೂರು ತಾಲ್ಲೂಕಿನ ಹಂಪನಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕ ರವೀಶ ಅವರು ಆಯ್ಕೆಯಾಗಿದ್ದಾರೆ.

ರಾಯಚೂರು ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಜಯಮ್ಮ ಕೆ. ನರಸಣ್ಣಚಾರಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಖಾಸಿಂ ನಾಯಕ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಮಹ್ಮದ್ ಯೂಸುಪ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಚಂದ್ರಶೇಖರ್, ವೆಂಕಟೇಶ ಗುಡಿಹಾಳ, ಅಶೊಕ ಸಿಂದಗಿ, ಋಷಿಬೇಂದ್ರ, ಕರ್ನಾಟಕ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸೈಯಾದ್ ಸಿರಾದ್, ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವೀರಭದ್ರಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT