ಬುಧವಾರ, ಫೆಬ್ರವರಿ 26, 2020
19 °C

ಮಕ್ಕಳಲ್ಲಿ ಶಿಕ್ಷಕರು ಪ್ರಶ್ನೆ ಕೇಳುವ ಪ್ರವೃತ್ತಿ ಬೆಳೆಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಮಕ್ಕಳು ಶಿಕ್ಷಕರಿಗೆ ಪ್ರಶ್ನೆ ಕೇಳುವ ಪ್ರವೃತಿ ಬೆಳೆಸಿದಾಗ ಮಾತ್ರ ಮಗುವಿಗೆ ಶಿಕ್ಷಣ ಕಲಿಯುವ ಬಗ್ಗೆ ಆಸಕ್ತಿ ಮೂಡಿಸಲು ಸಾಧ್ಯ ಎಂದು ಕಲಬುರ್ಗಿ ಹೆಚ್ಚುವರಿ ಕಾರ್ಯಾಲಯದ ಜಂಟಿ ನಿರ್ದೇಶಕ ವಿಜಯಕುಮಾರ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ’ಜಿಲ್ಲೆಯ ಸರ್ಕಾರಿ ಪ್ರೌಢಶಾಲೆಗಳ ಮುಖ್ಯೋಪಾಧ್ಯಾರಿಗೆ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕಾರ್ಯಾಗಾರ’ದಲ್ಲಿ ಮಾತನಾಡಿದರು.

ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಆಧುನಿಕ ಜಗತ್ತಿನಲ್ಲಿ ಅತಿಅವಶ್ಯಕ. ಶಾಲೆಗೆ ಬಿಡುಗಡೆಯಾದ ಅನುದಾನವನ್ನು ಮುಖೋಪಾಧ್ಯಾಯರು ನಿಯಮಾನುಸಾರವಾಗಿ ಬಳಕೆ ಮಾಡಬೇಕು. ಬಿಡುಗಡೆಯಾದ ಅನುದಾನ ಬಳಕೆ ಮಾಡದೆ ಇರುವುದು ಅಪರಾಧ, ಸರ್ಕಾರ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಾಕಷ್ಟು ಅನುದಾನ ನೀಡುತ್ತಿದೆ ಎಂದು ವಿವರಿಸಿದರು.

ಶಿಕ್ಷಕರು ಮಕ್ಕಳಿಗೆ ಪ್ರಶ್ನಿಸುವ ಹಕ್ಕು ನೀಡಬೇಕು. ಶಾಲೆ ಕೋಣೆಯಲ್ಲಿ ಶಿಕ್ಷಕರು ಪಾಠ ಪ್ರವಚನ ಬೋಧಿಸುವ ಸಂದರ್ಭದಲ್ಲಿ ಮಕ್ಕಳಿಗೆ ಯಾವುದೇ ಒಂದು ವಿಷಯವು ಅರ್ಥವಾಗದ ವೇಳೆ ಮಗು ಎದ್ದುನಿಂತು ಪಠ್ಯದ ಬಗ್ಗೆ ಶಿಕ್ಷಕರಿಗೆ ಪ್ರಶ್ನೆ ಕೇಳಿದಾಗ ಅದಕ್ಕೆ ಸಮರ್ಪಕವಾಗಿ ಉತ್ತರಿಸಬೇಕು ಎಂದರು.

ಶಿಕ್ಷಕರು ಮಕ್ಕಳ ಮನ ಮುಟ್ಟುವಂತಹ ಶಿಕ್ಷಣ ನೀಡಿದಾಗ ಮಾತ್ರ ಕಲ್ಯಾಣ ಕರ್ನಾಟಕ ಅಭಿವೃದ್ಧಿಯಾಗಲು ಸಾಧ್ಯ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಶೇ 100 ರಷ್ಟು ಬರಲು ಎಲ್ಲ ಶಿಕ್ಷಕರು ಮತ್ತು ಮುಖೋಪಾಧ್ಯಾಯರು ಶ್ರಮಿಸಬೇಕು ಎಂದರು.

ವಿಷಯ ಪರಿವೀಕ್ಷಕ ನಾಗೇಂದ್ರಪ್ಪ ಮಾತನಾಡಿ, ಶಿಕ್ಷಕರು ಶೈಕ್ಷಣಿಕ ಜವಾಬ್ದಾರಿಯನ್ನು ಅರಿತು ಕೆಲಸ ಮಾಡಬೇಕಾಗಿದೆ. ಮುಖ್ಯ ಶಿಕ್ಷಕರು ತಮ್ಮ ಐಚ್ಛಿಕ ವಿಷಯದ ಪಾಠ ಬೋಧನೆಯನ್ನು ವಾರದಲ್ಲಿ ಕನಿಷ್ಠ ಎರಡು ತರಗತಿಗಳನ್ನು ಮಾಡಬೇಕು, ಶಿಕ್ಷಕರಿಗೆ ಸ್ನೇಹ ಪೂರ್ವ ಮಾರ್ಗದರ್ಶನ ನೀಡಬೇಕು ಎಮದು. ಶಾಲಾ ವಾತಾವರಣ ಉತ್ತಮಪಡಿಸುವುದರ ಮೂಲಕ ಆನಂದದಾಯಕ ಕಲಿಕೆಗೆ ಒತ್ತು ನೀಡಬೇಕು ಎಂದು ತಿಳಿಸಿದರು.

ಜಿಲ್ಲೆಯ ಎಲ್ಲ ಸರ್ಕಾರಿ ಶಾಲೆಯ ಮುಖೋಪಾಧ್ಯಾಯರು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು