ರಾಯಚೂರು: ನಗರದಲ್ಲಿ 27 ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಭಾನುವಾರ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಸ್ಪರ್ಧಾತ್ಮಕ ಪರೀಕ್ಷೆ ನಡೆಯಿತು.

ಟಿಇಟಿ ಪ್ರಥಮ ಪತ್ರಿಕೆ ಪರೀಕ್ಷೆಗಾಗಿ 2,965 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದು, ಇದರಲ್ಲಿ 2397 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಉಳಿದ 568 ಅಭ್ಯರ್ಥಿಗಳು ಗೈರು ಹಾಜರಾಗಿದ್ದಾರೆ. ಮಧ್ಯಾಹ್ನ ನಡೆದ ಟಿಇಟಿ ಎರಡನೇ ಪತ್ರಿಕೆ ಪರೀಕ್ಷೆಗಾಗಿ 6,769 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. 5,933 ಅಭ್ಯರ್ಥಿಗಳು ಹಾಜರಾಗಿ ಉಳಿದ 839 ಅಭ್ಯರ್ಥಿಗಳು ಗೈರುಹಾಜರಾಗಿದ್ದಾರೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಪರೀಕ್ಷೆಯಲ್ಲಿ ಕೋವಿಡ್ ಮಾರ್ಗದರ್ಶನಗಳನ್ನು ಪಾಲಿಸಲಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಗೋನಾಳ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.