ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಚ್ಛತಾ ಪಾಕ್ಷಿಕ ಆಂದೋಲನ

Last Updated 12 ಏಪ್ರಿಲ್ 2022, 13:16 IST
ಅಕ್ಷರ ಗಾತ್ರ

ಕವಿತಾಳ: ‘ಶೌಚಾಲಯವನ್ನು ಕಡ್ಡಾಯವಾಗಿ ಬಳಸುವ ಮೂಲಕ ಸ್ವಚ್ಛತೆ ಕಾಪಾಡಲು ಪ್ರತಿಯೊಬ್ಬರೂ ಸಹಕರಿಸಬೇಕು’ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ ಹೇಳಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರು ಮತ್ತು ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ಪಟ್ಟಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಪಾಕ್ಷಿಕ ಆಂದೋಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ವಾರದಲ್ಲಿ ಎರಡು ಗಂಟೆಯ ಅವಧಿಯನ್ನು ಸ್ವಚ್ಛತೆ ಕಾಪಾಡಲು ಬಳಸುವುದಾಗಿ ಮತ್ತು ಸ್ವತ ತಾವು ಪರಿಸರವನ್ನು ಮಲೀನಗೊಳಿಸುವುದಿಲ್ಲ ಹಾಗೂ ಮಲೀನಗೊಳಿಸಲು ಬಿಡುವುದಿಲ್ಲ’ ಎಂದು ಸಿಬ್ಬಂದಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.

ಡಾ.ಅಮೃತ್ ರಾಠೋಡ್, ಡಾ.ಬಸವರಾಜ, ಡಾ.ಮಲ್ಲನಗೌಡ, ಆರೋಗ್ಯ ನಿರೀಕ್ಷಣಾಧಿಕಾರಿ ಪ್ರದೀಪ್ ಕುಮಾರ, ಸಿಬ್ಬಂದಿ ಸುಮಾ, ನೀತಾ, ರಾಜೇಶ್ವರಿ, ಸೌಭಾಗ್ಯ, ಶಿವಲಿಂಗಮ್ಮ ಮತ್ತು ಶಿವಕುಮಾರ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT