ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಖಂಡನೆ

ಮಾನ್ವಿ: ಜಯ ಕರ್ನಾಟಕ ರಕ್ಷಣಾ ಸೇನೆಯಿಂದ ತಹಶೀಲ್ದಾರ್‌ಗೆ ಮನವಿ
Last Updated 8 ಏಪ್ರಿಲ್ 2022, 12:22 IST
ಅಕ್ಷರ ಗಾತ್ರ

ಮಾನ್ವಿ: ಅಗತ್ಯ ವಸ್ತುಗಳ ನಿರಂತರ ಬೆಲೆ ಏರಿಕೆ ಖಂಡಿಸಿ ಜಯ ಕರ್ನಾಟಕ ರಕ್ಷಣಾ ಸೇನೆಯ ತಾಲ್ಲೂಕು ಘಟಕದ ಪದಾಧಿಕಾರಿಗಳು ಶುಕ್ರವಾರ ತಹಶೀಲ್ದಾರ್ ಅಬ್ದುಲ್ ವಾಹಿದ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಪ್ರಸ್ತುತ ದಿನಗಳಲ್ಲಿ ದಿನ ಬಳಕೆಯ ವಸ್ತುಗಳಾದ ಅಡುಗೆ ಅನಿಲ, ಅಡುಗೆ ಎಣ್ಣೆ, ಪೆಟ್ರೋಲ್, ಡೀಸೆಲ್, ಔಷಧಿಗಳು ಇನ್ನಿತರ ಅಗತ್ಯ ವಸ್ತುಗಳ ನಿರಂತರ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ದಿನಗೂಲಿ ಅವಲಂಬಿಸಿ ಬದುಕು ನಡೆಸುತ್ತಿರುವ ಬಡಜನರು ಕುಟುಂಬ ನಿರ್ವಹಣೆಗೆ ಪರಿತಪಿಸುವಂತಾಗಿದೆ. ಜನರ ಹಿತರಕ್ಷಣೆ ಮಾಡಬೇಕಾದ ಸರ್ಕಾರಗಳು ಜವಾಬ್ದಾರಿ ಮರೆತಿವೆ ಎಂದು ಸಂಘಟನೆಯ ಮುಖಂಡರು ದೂರಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಆದಷ್ಟು ಬೇಗ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು. ಬಡ, ಕೂಲಿಕಾರ್ಮಿಕ ಕುಟುಂಬಗಳಿಗೆ ಅನುಗುಣವಾಗಿ ಆರ್ಥಿಕ ನೆರವಿನ ಪ್ಯಾಕೇಜ್ ಘೋಷಣೆ ಮಾಡಬೇಕು. ಈ ಕುರಿತು ನಿರ್ಲಕ್ಷ್ಯ ವಹಿಸಿದರೆ ಸಂಘಟನೆ ವತಿಯಿಂದ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಮುಖ್ಯಮಂತ್ರಿಗೆ ಬರೆದ ಬೇಡಿಕೆಗಳ ಮನವಿ ಪತ್ರವನ್ನು ತಹಶೀಲ್ದಾರ್ ಅಬ್ದುಲ್ ವಾಹಿದ್ ಅವರಿಗೆ ಸಲ್ಲಿಸಲಾಯಿತು.

ಜಯ ಕರ್ನಾಟಕ ರಕ್ಷಣಾ ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷ ರಾಜಾ ವಿಜಯಕುಮಾರ ನಾಯಕ, ಇತರ ಪದಾಧಿಕಾರಿಗಳಾದ ಶ್ರೀಕಾಂತ ಗುತ್ತೇದಾರ, ಬಸವರಾಜ ಮೇಟಿ, ರವಿಚಂದ್ರನಾಯಕ ಗವಿಗಟ್ಟು, ವಿಜಯ ಸುಂಕೇಶ್ವರ, ಮಲ್ಲನಗೌಡ ಬೈಲ್ ಮರ್ಚೇಡ್, ಆನಂದ ಮೇದಾ, ಎಂ.ರಮೇಶ, ಮಹಾದೇವ, ರಮೇಶ, ಶ್ರೀಧರ ಮಾನ್ವಿ, ಶಿವಕುಮಾರ ಚಲ್ಮಲ್, ಎಂ.ಡಿ.ಜಾಫರ್, ಅನಿಲ್‌ಕುಮಾರ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT